ಬೆಂಗಳೂರು: ಗಡಿ ವಿಚಾರಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಸಿಎಂ ಉದ್ದವ್ ಠಾಕ್ರೆ ಕ್ಯಾತೆ ವಿಚಾರವಾಗಿ ಪ್ರತಿಕ್ರಿಯೆ ನೀಡಲು ನಿರಾಕರಿಸಿರುವ ಸಂಸದ ಅಂನಂತ್ ಕುಮಾರ್ ಹೆಗಡೆ ನೋ ಕಮೆಂಟ್ಸ್ ಎಂದು ಮಾತನಾಡದೇ ತೆರಳಿರುವುದು ಆಕ್ರೋಶಕ್ಕೆ ಕಾರಣವಾಗಿದೆ.
ಬೆಳಗಾವಿ ಸೇರಿದಂತೆ ಕರ್ನಾಟಕ ಆಕ್ರಮಿತ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸುತ್ತೇವೆ ಎಂದು ಹೇಳುವ ಮೂಲಕ ಗಡಿ ವಿಚಾರವಾಗಿ ಮತ್ತೆ ಕ್ಯಾತೆ ತೆಗೆದಿರುವ ಉದ್ಧವ್ ಠಾಕ್ರೆ ಹೇಳಿಕೆಗೆ ರಾಜ್ಯಾದ್ಯಂತ ಪ್ರತಿಭಟನೆ ವ್ಯಕ್ತವಾಗಿದ್ದು, ಮಹಾರಾಷ್ಟ್ರ ಸಿಎಂ ವಿರುದ್ಧ ಆಡಳಿತ ಹಾಗೂ ವಿಪಕ್ಷನಾಯಕರಾದಿಯಾಗಿ ಒಕ್ಕೊರಲಿನಿಂದ ಎಲ್ಲರೂ ಖಂಡನೆ ವ್ಯಕ್ತಪಡಿಸುತ್ತಿದ್ದಾರೆ. ಆದರೆ ಉತ್ತರ ಕನ್ನಡ ಜಿಲ್ಲೆಯ ಸಂಸದ ಅನಂತ್ ಕುಮಾರ್ ಹೆಗಡೆ ಮಾತ್ರ ಪ್ರತಿಕ್ರಿಯೆಗೆ ನಿರಾಕರಿಸಿರುವುದು ಅಚ್ಚರಿಗೆ ಕಾರಣವಾಗಿದೆ.
ಬೆಳಗಾವಿ ವಿಚಾರವಾಗಿ ಉದ್ಧವ್ ಠಾಕ್ರೆ ವಿವಾದಕ್ಕೆ ಪ್ರತಿಕ್ರಿಯೆ ಕೇಳಲು ಮುಂದಾದ ಮಾಧ್ಯವದವರ ಪ್ರಶ್ನೆಗೆ ʼನೋ ಕಮೆಂಟ್ಸ್ʼ ಎಂದಿರುವ ಅನಂತ್ ಕುಮಾರ್, ಕಾರವಾರ ಗಡಿ ವಿಚಾರವಾಗಿಯೂ ಮಹಾರಾಷ್ಟ್ರ ಸಚಿವರ ಕ್ಯಾತೆಗೂ ನೋ ಕಮೆಂಟ್ಸ್…ಎಲ್ಲರಿಗೂ ಧನ್ಯವಾದ ಯಾವುದೇ ಪ್ರತಿಕ್ರಿಯೆ ನೀಡಲ್ಲ ಎಂದು ಹೇಳಿ ಮುಂದೆ ಸಾಗಿದ್ದಾರೆ.