alex Certify ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೊಂದು ಶುಭ ಸುದ್ದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೊಂದು ಶುಭ ಸುದ್ದಿ

ಮಹಾಮಾರಿ ಕೊರೊನಾ ನಿಯಂತ್ರಣಕ್ಕಾಗಿ ಲಾಕ್ಡೌನ್ ಜಾರಿಯಾದ ಪರಿಣಾಮ ಅನೇಕರು ತಮ್ಮ ಉದ್ಯೋಗ ಕಳೆದುಕೊಂಡು ನಿರುದ್ಯೋಗಿಗಳಾಗಿದ್ದಾರೆ. ಮುಂದಿನ ದಿನಗಳಲ್ಲಿ ಉದ್ಯೋಗ ಸೃಷ್ಟಿಯಾಗುವುದು ಕಷ್ಟಸಾಧ್ಯ ಎಂಬ ಮಾತುಗಳ ಮಧ್ಯೆ ಶುಭ ಸುದ್ದಿಯೊಂದು ಇಲ್ಲಿದೆ.

ಲಾಕ್ಡೌನ್ ಜಾರಿಯಲ್ಲಿದ್ದರೂ ಸಹ ಪೊಲೀಸ್ ಇಲಾಖೆಯ ಹಲವು ಉದ್ಯೋಗಗಳಿಗೆ ನೇಮಕಾತಿ ಮಾಡಿಕೊಳ್ಳುತ್ತಿರುವ ರಾಜ್ಯ ಸರ್ಕಾರ, ಈಗ ಶಿಕ್ಷಣ ಇಲಾಖೆಯಲ್ಲಿ ಹೆಚ್ಚುವರಿ ಇರುವ ಹುದ್ದೆಗಳ ಭರ್ತಿಗೆ ಗ್ರೀನ್ ಸಿಗ್ನಲ್ ನೀಡಿದೆ.

ಗುರುವಾರದಂದು ಮುಖ್ಯಮಂತ್ರಿ ಯಡಿಯೂರಪ್ಪನವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ತೀರ್ಮಾನವನ್ನು ಕೈಗೊಳ್ಳಲಾಗಿದ್ದು, ಈ ಹುದ್ದೆಗಳ ಭರ್ತಿಗಾಗಿ ಶಿಕ್ಷಣ ಇಲಾಖೆ ವಿಶೇಷ ನೇಮಕ ನಿಯಮ 2014ಕ್ಕೆ ತಿದ್ದುಪಡಿ ತರಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...