ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ಸಿಹಿ ಸುದ್ದಿಯೊಂದು ಇಲ್ಲಿದೆ. ಗೌರವ ಧನದ ಆಧಾರದ ಮೇಲೆ ಅತಿಥಿ ಉಪನ್ಯಾಸಕರ ನೇಮಕಕ್ಕೆ ರಾಜ್ಯ ಸರ್ಕಾರ ಅನುಮತಿ ನೀಡಿದೆ.
2020 – 21 ನೇ ಸಾಲಿನ ಶೈಕ್ಷಣಿಕ ಸಾಲಿನಲ್ಲಿ ಸರ್ಕಾರಿ ಪದವಿಪೂರ್ವ ಕಾಲೇಜುಗಳಲ್ಲಿ ವಿವಿಧ ಕಾರಣಗಳಿಂದ ಒಟ್ಟು 2832 ಉಪನ್ಯಾಸಕರ ಹುದ್ದೆಗಳು ಖಾಲಿ ಇದ್ದು, ಈ ಪೈಕಿ 1835 ಹುದ್ದೆಗಳಿಗೆ ಅತಿಥಿ ಉಪನ್ಯಾಸಕರನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ವಾಹನ ಮಾಲೀಕರಿಗೆ ಇಲ್ಲಿದೆ ಮತ್ತೊಂದು ಮುಖ್ಯ ಮಾಹಿತಿ
ಫೆಬ್ರವರಿ ತಿಂಗಳಿನಿಂದ 9 ಸಾವಿರ ರೂ. ಗೌರವ ಧನದ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಲು ತೀರ್ಮಾನಿಸಲಾಗಿದ್ದು, ಇದಕ್ಕಾಗಿ ಪದವಿಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.