ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನ್ಯಾಸಕ ಹುದ್ದೆಗಳಿಗೆ ಆಯ್ಕೆಯಾಗಿದ್ದರೂ ಕೌನ್ಸಿಲಿಂಗ್ ನಡೆಯದೆ ನೇಮಕಾತಿ ಪತ್ರ ಸಿಗದ ಕಾರಣ ಅತಂತ್ರವಾಗಿದ್ದ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿಯೊಂದು ಇಲ್ಲಿದೆ.
ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಆಗಸ್ಟ್ 10ರಂದು ಕೌನ್ಸಿಲಿಂಗ್ ನಡೆಸಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
ಈ ಕುರಿತ ಅಧಿಕೃತ ಆದೇಶ ಇಂದು ಹೊರಬೀಳುವ ಸಾಧ್ಯತೆ ಇದ್ದು, ನೇಮಕಾತಿಯ ನಿರೀಕ್ಷೆಯಲ್ಲಿದ್ದ ಅಭ್ಯರ್ಥಿಗಳ ಬಹುದಿನಗಳ ಬೇಡಿಕೆ ಕೊನೆಗೂ ಈಡೇರುವ ಕಾಲ ಸನ್ನಿಹಿತವಾಗಿದೆ.