ದೇಶಕ್ಕೆ ಮಹಾಮಾರಿಯಾಗಿ ವಕ್ಕರಿಸಿಕೊಂಡಿರುವ ಕೊರೊನಾ ಪರಿಣಾಮ ಲಾಕ್ಡೌನ್ ಜಾರಿಗೊಳಿಸಿದ್ದ ಕಾರಣ ಆರ್ಥಿಕ ಪರಿಸ್ಥಿತಿ ಅಲ್ಲೋಲಕಲ್ಲೋಲವಾಗಿದೆ.
ಈ ಹಿನ್ನೆಲೆಯಲ್ಲಿ ಸದ್ಯಕ್ಕೆ ಯಾವುದೇ ನೇಮಕಾತಿ ನಡೆಯುವುದಿಲ್ಲವೆಂದು ಭಾವಿಸಿದ್ದ ಉದ್ಯೋಗಾಕಾಂಕ್ಷಿಗಳು ನಿರಾಸೆಗೊಂಡಿದ್ದರು. ಇದೀಗ ಪಿಯು ಉಪನ್ಯಾಸಕ ಹುದ್ದೆ ನಿರೀಕ್ಷೆಯಲ್ಲಿದ್ದವರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ.
ಬಾಕಿ ಉಳಿದಿರುವ ದ್ವಿತೀಯ ಪಿಯುಸಿ ಇಂಗ್ಲಿಷ್ ವಿಷಯದ ಪರೀಕ್ಷೆ ಮುಗಿದ ಬಳಿಕ ಪಿಯು ಉಪನ್ಯಾಸಕರ ನೇಮಕಾತಿ ಪ್ರಕ್ರಿಯೆ ನಡೆಯಲಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದು, ಜುಲೈ ಅಂತ್ಯದೊಳಗೆ ಈ ಎಲ್ಲ ಪ್ರಕ್ರಿಯೆ ಪೂರ್ಣಗೊಂಡು ನೇಮಕಾತಿ ಆದೇಶ ಅಭ್ಯರ್ಥಿಗಳಿಗೆ ಸಿಗಲಿದೆ ಎಂದು ತಿಳಿಸಿದ್ದಾರೆ.