
ರಾಜ್ಯದಲ್ಲಿ ಬೆಳಗಾವಿ ಲೋಕಸಭೆ ಹಾಗೂ ಮಸ್ಕಿ ಮತ್ತು ಬಸವಕಲ್ಯಾಣ ವಿಧಾನಸಭಾ ಕ್ಷೇತ್ರಗಳಿಗೆ ಇಂದು ಮತದಾನ ನಡೆಯುತ್ತಿದೆ. ಉಪ ಚುನಾವಣೆ ಹಿನ್ನೆಲೆಯಲ್ಲಿ ಈ ಕ್ಷೇತ್ರಗಳಲ್ಲಿ ವ್ಯಾಪಕ ಬಂದೋಬಸ್ತ್ ಮಾಡಲಾಗಿತ್ತು.
ಉಪ ಚುನಾವಣೆ ಕರ್ತವ್ಯಕ್ಕೆ ಆಗಮಿಸಿದ್ದ ಹುಕ್ಕೇರಿ ತಾಲೂಕು ಯಮಕನಮರಡಿ ಪೊಲೀಸ್ ಠಾಣೆ ಸಹಾಯಕ ಸಬ್ ಇನ್ಸ್ಪೆಕ್ಟರ್ 57 ವರ್ಷದ ಪೂಜಾರ ಸಾವನ್ನಪ್ಪಿರುವ ಘಟನೆ ನಡೆದಿದೆ.
‘ಕೊರೊನಾ’ ಸೋಂಕಿತರ ಬೇಡಿಕೆ ಕೇಳಿ ವೈದ್ಯರಿಗೆ ಶಾಕ್…!
ಪೂಜಾರ ಅವರನ್ನು ಗೋಕಾಕ್ ವಿಧಾನಸಭಾ ಕ್ಷೇತ್ರದ ಸೆಕ್ಟರ್ ಅಧಿಕಾರಿಯಾಗಿ ನೇಮಿಸಲಾಗಿದ್ದು, ಮತಗಟ್ಟೆ ಪರಿಶೀಲನೆ ನಡೆಸುತ್ತಿದ್ದ ವೇಳೆ ಹೃದಯಾಘಾತಕ್ಕೊಳಗಾದ ಅವರು ಕುಸಿದು ಬಿದ್ದು ಸಾವಿಗೀಡಾಗಿದ್ದಾರೆ.