ಮಂಗಳೂರು: ಎಲೆಕ್ಟ್ರಿಕಲ್ ಕುಕ್ಕರ್ ನಲ್ಲಿ ಚಿನ್ನವಿಟ್ಟು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವ್ಯಕ್ತಿಯೋರ್ವನನ್ನು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ.
ಬಂಧಿತನನ್ನು ಕಾಸರಗೋಡು ಮೂಲದ ಸುರೇಶ್ ಎಂದು ಗುರುತಿಸಲಾಗಿದೆ. ಈತನಿಂದ 25 ಲಕ್ಷ ಮೌಲ್ಯದ ಚಿನ್ನವನ್ನು ವಶಕ್ಕೆ ಪಡೆಯಲಾಗಿದೆ.
ಏರ್ ಇಂಡಿಯಾ ಎಕ್ಸ್ ಪ್ರೆಸ್ ನಲ್ಲಿ ಆಗಮಿಸಿದ್ದ ಆರೋಪಿ, ಎಲೆಕ್ಟ್ರಿಕ್ ಕುಕ್ಕರ್ ನಲ್ಲಿ ಚಿನ್ನವನ್ನಿಟ್ಟು ಸಾಗಾಟ ಮಾಡುತ್ತಿದ್ದ. ಕಸ್ಟಮ್ಸ್ ಅಧಿಕಾರಿಗಳು ಪರಿಶೀಲನೆ ನಡೆಸಿದಾಗ ಸಿಕ್ಕಿ ಬಿದ್ದಿದ್ದು, 25 ಲಕ್ಷ ಮೌಲ್ಯದ ಚಿನ್ನವನ್ನು ವಶಕ್ಕೆ ಪಡೆಯಲಾಗಿದೆ.