alex Certify ಎಸ್.ಎಸ್.ಎಲ್.ಸಿ. – ಪಿಯುಸಿ ಪರೀಕ್ಷೆ ಬಗ್ಗೆ ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಎಸ್.ಎಸ್.ಎಲ್.ಸಿ. – ಪಿಯುಸಿ ಪರೀಕ್ಷೆ ಬಗ್ಗೆ ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ

ಚಾಮರಾಜನಗರ: ಸಿ ಬಿ ಎಸ್ ಸಿ 10ನೇ ತರಗತಿ ಪರೀಕ್ಷೆ ರದ್ದು ಮಾಡಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಎಸ್.ಎಸ್.ಎಲ್.ಸಿ. ಹಾಗೂ ಪಿಯುಸಿ ಪರೀಕ್ಷೆಗಳು ರದ್ದಾಗಲಿವೆ ಎಂಬ ಬಗ್ಗೆ ಸುದ್ದಿಗಳು ಹರಡುತ್ತಿವೆ ಈ ಬಗ್ಗೆ ಇಂದು ಸ್ವತ: ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ.

ಚಾಮರಾಜನಗರದಲ್ಲಿ ಮಾತನಾಡಿದ ಸುರೇಶ್ ಕುಮಾರ್, ರಾಜ್ಯದಲ್ಲಿ ಎಸ್.ಎಸ್.ಎಲ್.ಸಿ. ಹಾಗೂ ಪಿಯು ಪರೀಕ್ಷೆಗಳು ನಡೆಯಲಿವೆ. ಈ ಬಗ್ಗೆ ಗೊಂದಲ ಬೇಡ. ಎಸ್.ಎಸ್.ಎಲ್.ಸಿ. ಪರೀಕ್ಷೆ ನಿಗದಿಯಾಗಿರುವುದು ಜೂನ್ 21ರಿಂದ ಕಳೆದ ವರ್ಷ ನಿಡಲಾಗಿದ್ದ ಎಸ್ಒಪಿಯನ್ನೇ ಅಳವಡಿಕಾ ಕ್ರಮವಾಗಿ ಅನುಸರಿಸಲಾಗುವುದು ಎಂದರು.

ಇಲ್ಲಿದೆ ಕೊರೊನಾ 2ನೇ ಅಲೆ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಕೈಗೊಂಡ ಕ್ರಮಗಳ ಮಾಹಿತಿ

ಎಸ್.ಎಸ್.ಎಲ್.ಸಿ. ಪರೀಕ್ಷೆ ನಡೆಸಬೇಕು ಎಂಬುದು ಹಲವರ ಒತ್ತಾಯ. ಈ ಬಗ್ಗೆ ಸಭಾಪತಿ ಬಸವರಾಜ್ ಹೊರಟ್ಟಿ ಕೂಡ ಪತ್ರ ಬರೆದಿದ್ದಾರೆ. ಪರೀಕ್ಷಾ ದಿನಾಂಕಕ್ಕೆ ಇನ್ನೂ ಎರಡು ತಿಂಗಳ ಕಾಲಾವಕಾಶವಿದೆ. ಹಾಗಾಗಿ ಆಗಿನ ಪರಿಸ್ಥಿತಿ ನೋಡಿಕೊಂಡು ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಇನ್ನು 1-9ನೇ ತರಗತಿ ಪರೀಕ್ಷೆಗಳ ಬಗ್ಗೆ ಒಂದೆರಡು ದಿನಗಳಲ್ಲಿ ಅಧಿಕಾರಿಗಳ ಜೊತೆ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳಲಗುತ್ತದೆ ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...