ಕೊರೊನಾ ಕಾರಣಕ್ಕೆ ಕಳೆದ ಐದು ತಿಂಗಳಿಗೂ ಅಧಿಕ ಕಾಲದಿಂದ ಶಾಲಾ – ಕಾಲೇಜುಗಳು ಬಂದ್ ಆಗಿವೆ. ಆದರೆ ವಿದ್ಯಾರ್ಥಿಗಳ ಶೈಕ್ಷಣಿಕ ಚಟುವಟಿಕೆಗೆ ಕುಂದು ಬರಬಾರದೆಂಬ ಕಾರಣಕ್ಕೆ ಆನ್ಲೈನ್ ಮೂಲಕ ಪಾಠ ಪ್ರವಚನವನ್ನು ಆರಂಭಿಸಲಾಗಿದೆ.
ಆದರೆ ಎಲ್ಲ ವಿದ್ಯಾರ್ಥಿಗಳಿಗೂ ಸ್ಮಾರ್ಟ್ಫೋನ್ ಖರೀದಿಸಲು ಸಾಧ್ಯವಾಗುತ್ತಿಲ್ಲ. ಅಲ್ಲದೆ ಬಹಳಷ್ಟು ಕಡೆಗಳಲ್ಲಿ ನೆಟ್ವರ್ಕ್ ಸಮಸ್ಯೆಯೂ ಕಾಡುತ್ತಿರುವುದರಿಂದ ಆನ್ಲೈನ್ ಶಿಕ್ಷಣಕ್ಕೆ ಅಡ್ಡಿಯಾಗುತ್ತಿದೆ ಎಂಬ ಮಾತುಗಳು ಕೇಳಿಬರುತ್ತಿದೆ.
ಇದರ ಮಧ್ಯೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿಯೊಂದನ್ನು ನೀಡಿದೆ. ದಾವಣಗೆರೆಯಲ್ಲಿ ಮಾತನಾಡಿರುವ ಸಮಾಜ ಕಲ್ಯಾಣ ಮತ್ತು ಲೋಕೋಪಯೋಗಿ ಇಲಾಖೆ ಸಚಿವ ಗೋವಿಂದ ಕಾರಜೋಳ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ವಿದ್ಯಾರ್ಥಿಗಳ ಆನ್ಲೈನ್ ಶಿಕ್ಷಣಕ್ಕೆ ಅನುಕೂಲವಾಗುವಂತೆ ಮೊಬೈಲ್ ನೀಡುವ ಚಿಂತನೆಯನ್ನು ಸರ್ಕಾರ ಹೊಂದಿದೆ ಎಂದು ತಿಳಿಸಿದ್ದಾರೆ.