ಬೆಂಗಳೂರು: ಐಎಂಎ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ರೋಷನ್ ಬೇಗ್ ಗೆ ಜಾಮೀನು ಮಂಜೂರು ಮಾಡಲಾಗಿದೆ.
ರೋಷನ್ ಬೇಗ್ ತನಿಖೆಗೆ ಸಹಕರಿಸಿದ್ದಾರೆ. ಅವರ ವಿರುದ್ಧದ ತನಿಖೆಯೂ ಮುಕ್ತಾಯವಾಗಿರುವುದರಿಂದ ಜಾಮೀನು ಮಂಜೂರು ಮಾಡುವಂತೆ ಬೇಗ್ ಪರ ವಕೀಲ ಶಶಿಕಿರಣ ಶೆಟ್ಟಿ ವಾದಿಸಿದ್ದರು.
ಈ ಹಿನ್ನೆಲೆಯಲ್ಲಿ ಸಿಬಿಐ ವಿಶೇಷ ನ್ಯಾಯಾಲಯ ರೋಷನ್ ಬೇಗ್ ಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.