ಮೈಸೂರು: ಶಾಲಾ ಮಕ್ಕಳನ್ನು ಸೆಳೆಯಲು ಡ್ರಗ್ಸ್ ದಂಧೆ ಕೋರರು ಐಸ್ ಕ್ರೀಂ ಮತ್ತು ಚಾಕೋಲೇಟ್ ಗಳಲ್ಲಿ ಡ್ರಗ್ಸ್ ಸವರಿ ನೀಡುತ್ತಿರುವ ಸಾಧ್ಯತೆಯಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿನ ಡ್ರಗ್ಸ್ ಮಾಫಿಯಾ ವಿರುದ್ಧ ಸರ್ಕಾರ ಕಠಿಣ ಕ್ರಮಗಳನ್ನು ಕೈಗೊಳ್ಳಲಿದೆ. ಪ್ರತಿಷ್ಠಿತ ಶಾಲೆಗಳಲ್ಲಿ ವಿದ್ಯಾಭಾಸ ಮಾಡುತ್ತಿರುವ ಮಕ್ಕಳನ್ನು ಸೆಳೆಯುವ ಉದ್ದೇಶದಿಂದ ಐಸ್ ಕ್ರೀಂ ಹಾಗೂ ಚಾಕೋಲೆಟ್ ಗಳಲ್ಲೂ ಡ್ರಗ್ಸ್ ಸವರಿ ನೀಡುತ್ತಿದ್ದಾರೆ ಎಂಬ ಸುದ್ದಿಯಿದೆ ಎಂದರು.
ಮಕ್ಕಳನ್ನು, ಯುವ ಜನತೆಯನ್ನು ಡ್ರಗ್ಸ್ ಜಾಲಕ್ಕೆ ಎಳೆಯುವ ಪ್ರಯತ್ನಗಳಾಗುತ್ತಿವೆ. ಯುವ ಜನತೆಯನ್ನು ದುರ್ಬಲಗೊಳಿಸುವ ಪ್ರಯತ್ನಕ್ಕೆ ಅಂತ್ಯ ಹಾಡಬೇಕಿದೆ. ಈ ನಿಟ್ಟಿನಲ್ಲಿ ಸರ್ಕಾರ ಡ್ರಗ್ಸ್ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದೆ ಎಂದು ಹೇಳಿದರು.
ಇನ್ನು ಸ್ಯಾಂಡಲ್ ವುಡ್ ಗೆ ಡ್ರಗ್ಸ್ ನಂಟು ವಿಚಾರಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿಯವರನ್ನು ಬಂಧಿಸಲಾಗಿದೆ. ವಿಚಾರಣೆ ಕೂಡ ನಡೆಯುತ್ತಿದೆ ಎಂದರು.