ಬೆಂಗಳೂರು: ಸ್ಯಾಂಡಲ್ ವುಡ್ ಡ್ರಗ್ಸ್ ಮಾಫಿಯಾ ಪ್ರಕರಣ ಸಂಬಂಧ ಬಂಧದಲ್ಲಿರುವ ನಟಿ ಸಂಜನಾ ಗಲ್ರಾಣಿ ಅವರ 5 ದಿನಗಳ ಪೊಲೀಸ್ ಕಸ್ಟಡಿ ನಾಳೆಗೆ ಅಂತ್ಯವಾಗಲಿದೆ. ಆದರೆ ಸಂಜನಾಗೆ ಒಂದು ದಿನ ಮುಂಚಿತವಾಗಿಯೇ ಕೋರ್ಟ್ ಗೆ ಹಾಜರು ಪಡಿಸುವ ಸಾಧ್ಯತೆಯಿದೆ.
ನಟಿ ಸಂಜನಾ ಅವರ ಪೊಲೀಸ್ ಕಸ್ಟಡಿ ಅವಧಿ ನಾಳೆಗೆ ಅಂತ್ಯವಾಗುತ್ತಿದೆ. ಆದರೆ ನಾಳೆ ಶನಿವಾರವಾಗಿರುವುದರಿಂದ ಕೋರ್ಟ್ ಗೆ ರಜೆ ಇರುವ ಹಿನ್ನಲೆಯಲ್ಲಿ ನಾಳೆ ನ್ಯಾಯಾಧೀಶರು ಸಿಗುವ ಸಾಧ್ಯತೆ ಕಡಿಮೆ. ಇದೇ ಕಾರಣಕ್ಕೆ ಸಂಜನಾ ಅವರನ್ನು ಒಂದು ದಿನ ಮುಂಚಿತವಾಗಿ ಅಂದರೆ ಇಂದೇ ಸಿಸಿಬಿ ಅಧಿಕಾರಿಗಳು ನ್ಯಾಯಾಲಯದ ಮುಂದೆ ಹಾಜರು ಪಡಿಸಲಿದ್ದಾರೆ. ಈ ವೇಳೆ ಸಂಜನಾ ಅವರನ್ನೂ ಇನ್ನಷ್ಟು ದಿನಗಳ ಕಾಲ ವಿಚಾರಣೆ ನಡೆಸಲು ಪೊಲೀಸ್ ಕಸ್ಟಡಿಗೆ ವಹಿಸುವಂತೆ ಸಿಸಿಬಿ ಅಧಿಕಾರಿಗಳು ಕೇಳಲಿದ್ದಾರೆ.
ಇನ್ನು ನಟಿ ರಾಗಿಣಿ ಅವರ 8 ದಿನಗಳ ಪೊಲೀಸ್ ಕಸ್ಟಡಿ ಅಂತ್ಯವಾಗಿರುವುದರಿಂದ ಮಧ್ಯಾಹ್ನ ಅವರನ್ನೂ ಸಿಸಿಬಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಿದೆ. ಈ ವೇಳೆ ರಾಗಿಣಿಯವರಿಗೆ ಕೋರ್ಟ್, ನ್ಯಾಯಾಂಗ ಬಂಧನಕ್ಕೆ ವಹಿಸಿದರೆ ಪರಪ್ಪನ ಅಗ್ರಹಾರಕ್ಕೆ ರಾಗಿಣಿಯವರನ್ನು ಶಿಫ್ಟ್ ಮಾಡಲಾಗುತ್ತದೆ.