alex Certify ಕಂಪ್ಲೀಟ್ ಲಾಕ್ ಡೌನ್ ವೇಳೆ ಮದುವೆಗಿಲ್ಲ ಅಡೆತಡೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಂಪ್ಲೀಟ್ ಲಾಕ್ ಡೌನ್ ವೇಳೆ ಮದುವೆಗಿಲ್ಲ ಅಡೆತಡೆ

4 ಹಂತದ ಲಾಕ್ ಡೌನ್ ಜಾರಿ ಸಂದರ್ಭದಲ್ಲಿ ಬಹಳಷ್ಟು ಸಡಿಲಿಕೆಗಳನ್ನು ನೀಡಿರುವ ರಾಜ್ಯ ಸರ್ಕಾರ, ಅನಿರ್ದಿಷ್ಟ ಅವಧಿಯವರೆಗೆ ಪ್ರತಿ ಭಾನುವಾರದಂದು ಕಂಪ್ಲೀಟ್ ಲಾಕ್ ಡೌನ್ ಘೋಷಿಸಿದೆ.

ಈ ಸಂದರ್ಭದಲ್ಲಿ ಬಸ್, ಆಟೋ, ಟ್ಯಾಕ್ಸಿ ಸೇರಿದಂತೆ ಯಾವುದೇ ವಾಹನಗಳ ಸಂಚಾರ ಇರುವುದಿಲ್ಲ. ಅಗತ್ಯ ಸೇವೆಗಳನ್ನು ಹೊರತುಪಡಿಸಿ ಉಳಿದೆಲ್ಲ ಸೇವೆಗಳು ಬಂದ್ ಆಗಲಿವೆ. ಸಾರ್ವಜನಿಕರೂ ಸಹ ಅನಗತ್ಯವಾಗಿ ರಸ್ತೆಗಿಳಿಯದಂತೆ ಎಚ್ಚರಿಸಲಾಗಿದೆ.

ಆದರೆ ಈಗಾಗಲೇ ನಿಗದಿಯಾಗಿರುವ ಮದುವೆ ಸಮಾರಂಭಗಳಿಗೆ ಯಾವುದೇ ಅಡೆತಡೆ ಇರುವುದಿಲ್ಲ. ಸರ್ಕಾರದ ನಿಯಮಾವಳಿಗಳಂತೆ ಕೇವಲ 50 ಮಂದಿ ಮಾತ್ರ ಮದುವೆ ಸಮಾರಂಭದಲ್ಲಿ ಭಾಗವಹಿಸಬಹುದಾಗಿದೆ.

ಈ ವೇಳೆ ಕೊರೊನಾ ಸೋಂಕು ಹರಡದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಸೂಚಿಸಲಾಗಿದ್ದು, ಮಾಸ್ಕ್ ಧರಿಸುವುದು ಹಾಗೂ ಸಾಮಾಜಿಕ ಅಂತರ ಕಾಪಾಡಿಕೊಳ್ಳಲು ಸಲಹೆ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...