ವಾಣಿಜ್ಯ ಮಳಿಗೆ ಹಾಗೂ ಬಹುಮಹಡಿಕಟ್ಟಡ ನಿರ್ಮಾಣ ಮಾಡುವ ಸಂದರ್ಭದಲ್ಲಿ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯಿಂದ ನಿರಾಕ್ಷೇಪಣಾ ಪತ್ರ ಪಡೆಯುವುದು ಕಡ್ಡಾಯವಾಗಿದೆ. ಆದರೆ ಇದನ್ನು ಪಡೆಯಲು ಈವರೆಗೆ ಅಲೆದಾಟ ನಡೆಸಬೇಕಾಗಿತ್ತು.
ಇದೀಗ ರಾಜ್ಯ ಸರ್ಕಾರ ಖುಷಿ ಸುದ್ದಿಯೊಂದನ್ನು ನೀಡಿದ್ದು, ವಾಣಿಜ್ಯ ಮಳಿಗೆ ಹಾಗೂ ಬಹುಮಹಡಿ ಕಟ್ಟಡಗಳ ನಿರ್ಮಾಣಕ್ಕಾಗಿ ನಿರಾಕ್ಷೇಪಣಾ ಪತ್ರವನ್ನು ಆನ್ಲೈನ್ ಮೂಲಕವೇ ಪಡೆಯುವ ಕುರಿತು ಆದೇಶ ಹೊರಡಿಸಿದೆ.
ಇನ್ನು ಮುಂದೆ ಭೌತಿಕವಾಗಿ ಅರ್ಜಿ ಸಲ್ಲಿಸುವ ಬದಲು ಆನ್ ಲೈನ್ ಮೂಲಕವೇ ಅರ್ಜಿ ಸಲ್ಲಿಸಿ ಈ ಸೇವೆಯನ್ನು ಪಡೆಯಬಹುದಾಗಿದ್ದು, ಸೇವಾ ಸಿಂಧು ಪೋರ್ಟಲ್ ನಲ್ಲಿ ಕಟ್ಟಡ ನಿರ್ಮಾಣದ ಕುರಿತು ಸಕಲ ಮಾಹಿತಿ ನೀಡಿದ ಬಳಿಕ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ನಿರಾಕ್ಷೇಪಣ ಪತ್ರ ನೀಡುವ ಕುರಿತು ತೀರ್ಮಾನ ಕೈಗೊಳ್ಳಲಿದ್ದಾರೆ.