alex Certify ಕಟ್ಟಡ ನಿರ್ಮಾಣ ಮಾಡುವವರಿಗೆ ಖುಷಿ ಸುದ್ದಿ: ಆನ್ಲೈನ್ ನಲ್ಲಿ ಸಿಗಲಿದೆ NOC | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಟ್ಟಡ ನಿರ್ಮಾಣ ಮಾಡುವವರಿಗೆ ಖುಷಿ ಸುದ್ದಿ: ಆನ್ಲೈನ್ ನಲ್ಲಿ ಸಿಗಲಿದೆ NOC

ವಾಣಿಜ್ಯ ಮಳಿಗೆ ಹಾಗೂ ಬಹುಮಹಡಿಕಟ್ಟಡ ನಿರ್ಮಾಣ ಮಾಡುವ ಸಂದರ್ಭದಲ್ಲಿ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯಿಂದ ನಿರಾಕ್ಷೇಪಣಾ ಪತ್ರ ಪಡೆಯುವುದು ಕಡ್ಡಾಯವಾಗಿದೆ. ಆದರೆ ಇದನ್ನು ಪಡೆಯಲು ಈವರೆಗೆ ಅಲೆದಾಟ ನಡೆಸಬೇಕಾಗಿತ್ತು.

ಇದೀಗ ರಾಜ್ಯ ಸರ್ಕಾರ ಖುಷಿ ಸುದ್ದಿಯೊಂದನ್ನು ನೀಡಿದ್ದು, ವಾಣಿಜ್ಯ ಮಳಿಗೆ ಹಾಗೂ ಬಹುಮಹಡಿ ಕಟ್ಟಡಗಳ ನಿರ್ಮಾಣಕ್ಕಾಗಿ ನಿರಾಕ್ಷೇಪಣಾ ಪತ್ರವನ್ನು ಆನ್ಲೈನ್ ಮೂಲಕವೇ ಪಡೆಯುವ ಕುರಿತು ಆದೇಶ ಹೊರಡಿಸಿದೆ.

ಇನ್ನು ಮುಂದೆ ಭೌತಿಕವಾಗಿ ಅರ್ಜಿ ಸಲ್ಲಿಸುವ ಬದಲು ಆನ್ ಲೈನ್ ಮೂಲಕವೇ ಅರ್ಜಿ ಸಲ್ಲಿಸಿ ಈ ಸೇವೆಯನ್ನು ಪಡೆಯಬಹುದಾಗಿದ್ದು, ಸೇವಾ ಸಿಂಧು ಪೋರ್ಟಲ್ ನಲ್ಲಿ ಕಟ್ಟಡ ನಿರ್ಮಾಣದ ಕುರಿತು ಸಕಲ ಮಾಹಿತಿ ನೀಡಿದ ಬಳಿಕ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ನಿರಾಕ್ಷೇಪಣ ಪತ್ರ ನೀಡುವ ಕುರಿತು ತೀರ್ಮಾನ ಕೈಗೊಳ್ಳಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...