ಬೆಂಗಳೂರು: ಮರಾಠಾ ಅಭಿವೃದ್ಧಿ ಪ್ರಾಧಿಕಾರ ರಚನೆ ವಿರೋಧಿಸಿ ಕನ್ನಡ ಪರ ಸಂಘಟನೆಗಳು ನಾಳೆ ಕರೆ ನೀಡಿರುವ ಕರ್ನಾಟಕ ಬಂದ್ ಗೆ ವಿವಿಧ ಸಂಘಟನೆಗಳು ಬೆಂಬಲ ನೀಡಿವೆ. ಇದರ ಬೆನ್ನಲ್ಲೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಬಂದ್ ನಿರ್ಧಾರ ಕೈ ಬಿಡುವಂತೆ ಮನವಿ ಮಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬಿ.ಎಸ್. ಯಡಿಯೂರಪ್ಪ, ವಾಟಾಳ್ ನಾಗರಾಜ್ ಅವರು ಬಂದ್ ಕರೆ ವಾಪಸ್ ಪಡೆಯಲಿ. ನಮ್ಮ ಸರ್ಕಾರ ಕನ್ನಡಿಗರ ಅಭಿವೃದ್ಧಿಗೆ ಬದ್ಧವಾಗಿದೆ. ಅನಗತ್ಯವಾಗಿ ಬಂದ್ ಮಾಡಿ ಜನರಿಗೆ ತೊಂದರೆ ಕೊಡುವುದು ಬೇಡ ಎಂದು ಹೇಳಿದರು.
ಇನ್ನು ನೈಟ್ ಕರ್ಫ್ಯೂ ವಿಚಾರವಾಗಿ ಮಾತನಾಡಿದ ಸಿಎಂ, ರಾಜ್ಯದಲ್ಲಿ ಸಧ್ಯಕ್ಕೆ ನೈಟ್ ಕರ್ಫ್ಯೂ ಜಾರಿಯಿಲ್ಲ ಎಂದು ಸ್ಪಷ್ಟಪಡಿಸಿದರು.