ಪತ್ರಿಕಾ ಸಂದರ್ಶನವೊಂದರಲ್ಲಿ ಮಾತನಾಡುತ್ತಿದ್ದ 86ನೇ ಕನ್ನಡ ಸಾಹಿತ್ಯ ಸಮ್ಮೇಳನದ ನಿಯೋಜಿತ ಅಧ್ಯಕ್ಷ ಡಾ. ದೊಡ್ಡರಂಗೇಗೌಡ, ಹಿಂದಿ ರಾಷ್ಟ್ರಭಾಷೆ. ಅದರ ತಿರಸ್ಕಾರ ಬೇಡ ಎಂದು ಹೇಳುವ ಮೂಲಕ ಕನ್ನಡಿಗರ ಆಕ್ರೋಶಕ್ಕೆ ಗುರಿಯಾಗಿದ್ದರು.
ಸಾಮಾಜಿಕ ಜಾಲತಾಣಗಳಲ್ಲಿ ದೊಡ್ಡರಂಗೇಗೌಡರ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿದ್ದ ಬಹುತೇಕ ಕನ್ನಡಿಗರು, ಕನ್ನಡದಂತೆ ಹಿಂದಿಯೂ ಕೂಡ ಒಂದು ಭಾಷೆ. ಹಿಂದಿ ರಾಷ್ಟ್ರ ಭಾಷೆಯಾಗಿದ್ದು ಯಾವಾಗ ಎಂದು ಪ್ರಶ್ನಿಸಿದ್ದರು.
ಶುಭ ಸುದ್ದಿ: 20 ಸಾವಿರ ಶಿಕ್ಷಕರ ನೇಮಕಾತಿ, ಸಚಿವ ಸುರೇಶ್ ಕುಮಾರ್ ಮಾಹಿತಿ
ಇದೀಗ ಕನ್ನಡಿಗರ ಆಕ್ರೋಶಕ್ಕೆ ಮಣಿದಿರುವ ಡಾ. ದೊಡ್ಡರಂಗೇಗೌಡ, ನಾನೇನು ಹಿಂದಿ ಭಾಷೆಯನ್ನು ತಲೆಮೇಲೆ ಹೊತ್ತು ಮೆರೆಸುತ್ತಿಲ್ಲ. ಕನ್ನಡಿಗರ ಮೇಲೆ ಹಿಂದಿ ಹಾಗೂ ಇಂಗ್ಲೀಷ್ ಭಾಷೆ ಹೇರಿಕೆಯ ರೀತಿ ನೀತಿಯನ್ನು ಸಹಿಸುವುದಿಲ್ಲ ಎಂದು ಹೇಳಿದ್ದಾರೆ. ಅಲ್ಲದೆ ತಾವು ಈ ಹಿಂದೆ ನೀಡಿದ್ದ ಹೇಳಿಕೆಗೆ ಕ್ಷಮೆ ಯಾಚಿಸಿದ್ದಾರೆ.