ಬೆಂಗಳೂರು: ಕರ್ತವ್ಯ ನಿರ್ವಹಿಸುವುದನ್ನು ಬಿಟ್ಟು ಹೋಟೆಲ್ ರೂಂ ನಲ್ಲಿ ಇಸ್ಪೀಟ್ ಆಟವಾಡುತ್ತಿದ್ದ 7 ಪೊಲೀಸರ ವಿರುದ್ಧ ಎಫ್ ಐ ಆರ್ ದಾಖಲಿಸಿರುವ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ.
ಪುಟ್ಟೇನಹಳ್ಳಿಯ 7 ಪೊಲೀಸ್ ಸಿಬ್ಬಂದಿ ಡ್ಯೂಟಿ ಬಿಟ್ಟು ಹೋಟೆಲ್ ವೊಂದರಲ್ಲಿ ಇಸ್ಪೀಟ್ ಆಡುತ್ತಾ ಕಾಲ ಕಳೆಯುತ್ತಿದ್ದರು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ದಕ್ಷಿಣ ವಲಯ ಡಿಸಿಪಿ ಹರೀಶ್ ಪಾಂಡೆ ನೇತೃತ್ವದ ತಂಡ 7 ಪೊಲೀಸ್ ಸಿಬ್ಬಂದಿಗಳನ್ನು ವಶಕ್ಕೆ ಪಡೆದಿದೆ.
7 ಪೊಲಿಸ್ ಸಿಬ್ಬಂದಿಗಳ ವಿರುದ್ಧ ಎಫ್ ಐ ಆರ್ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ.