ಬೆಂಗಳೂರು: ರಾಜ್ಯ ರೈತ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ ಗೆ ಜೆಡಿಎಸ್ ಸಂಪೂರ್ಣ ಬೆಂಬಲವಿದೆ ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡ ತಿಳಿಸಿದ್ದಾರೆ.
ರಾಜ್ಯ ಸರ್ಕಾರ ಜಾರಿ ಮಾಡಿರುವ ರೈತ ವಿರೋಧಿ ಮಸೂದೆಗಳಾದ ಭೂ ಸುಧಾರಣಾ ತಿದ್ದುಪಡಿ ಹಾಗೂ ಎಪಿಎಂಸಿ ತಿದ್ದುಪಡಿ ಕಾಯಿದೆ ವಿರುದ್ಧ ರೈತ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ ಗೆ ನಮ್ಮ ಬೆಂಬಲವಿದೆ. ಅನ್ನದಾತನಿಗೆ ತೊಂದರೆಯಾಗುವ ಕಾಯಿದೆ ಜಾರಿಯಾಗಲು ನಾವು ಬಿಡುವುದಿಲ್ಲ. ನಮ್ಮ ಪಕ್ಷ ರೈತ ಪರವಾಗಿದ್ದು, ಬಂದ್ ಗೆ ಬೆಂಬಲ ನೀಡುವುದಾಗಿ ತಿಳಿಸಿದ್ದಾರೆ.
ಇನ್ನು ನಾಳಿನ ಕರ್ನಾಟಕ ಬಂದ್ ಗೆ ಕಾಂಗ್ರೆಸ್ ಕೂಡ ಬೆಂಬಲ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ. ಈ ನಡುವೆ ರಾಜ್ಯ ಸರ್ಕಾರ ನಾಳಿನ ಕರ್ನಾಟಕ ಬಂದ್ ಕೈಬಿಡುವಂತೆ ಮನವಿ ಮಾಡಿದ್ದು, ಬಲವಂತದ ಬಂದ್ ಗೆ ಮುಂದಾದರೆ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದೆ.