ಬೆಂಗಳೂರು: ಹೈದರಾಬಾದ್-ಕರ್ನಾಟಕ ಈಗಿನ ಕಲ್ಯಾಣ ಕರ್ನಾಟಕ ಭಾಗದಲ್ಲಿ 145 ಶಿಕ್ಷಕರು ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ರಾಜ್ಯದ ಹಲವೆಡೆಗಳಲ್ಲಿ ಶಿಕ್ಷಕರು ಕೋವಿಡ್ ನಿಂದ ಮೃತಪಟ್ಟಿದ್ದಾರೆ ಆದರೆ ಅವರ ಬಗ್ಗೆ ಲೆಕ್ಕ ಸಿಗುತ್ತಿಲ್ಲ. ಸರ್ಕಾರದ ಆದೇಶ ಪಾಲನೆ ಮಾಡಲು ಹೀಗಿ ಶಿಕ್ಷಕರು ಪ್ರಾಣ ಕಳೆದುಕೊಳ್ಳುತ್ತಿದ್ದರೂ ರಾಜ್ಯ ಸರ್ಕಾರ ಮೃತ ಶಿಕ್ಷಕರ ಕುಟುಂಬಕ್ಕೆ ಪರಿಹಾರ ನೀಡದೇ ನಿರ್ಲಕ್ಷ್ಯ ವಹಿಸಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವಿಮಾನದಲ್ಲಿ ನಡೀತು ಅದ್ಧೂರಿ ಮದುವೆ….!
ಚುನಾವಣೆ ಕರ್ತವ್ಯದಲ್ಲಿ ದುಡಿದ ಮತ್ತು ವಿದ್ಯಾಗಮ ಯೋಜನೆ ಮೂಲಕ ಪಾಠ ಮಾಡಿದ ಕಲ್ಯಾಣ ಕರ್ನಾಟಕದ 145 ಶಿಕ್ಷಕರು ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಮೃತಪಟ್ಟ ಎಲ್ಲ ಶಿಕ್ಷಕರನ್ನು ಕೊರೋನಾ ವಾರಿಯರ್ಸ್ ಎಂದು ಪರಿಗಣಿಸಿ ಕನಿಷ್ಠ 50 ಲಕ್ಷ ರೂ. ಪರಿಹಾರ ನೀಡಬೇಕು ಎಂದು ಕುಮಾರಸ್ವಾಮಿ ಆಗ್ರಹಿಸಿದ್ದಾರೆ.
ವಿವಾದಿತ ಹೇಳಿಕೆ ಹಿಂಪಡೆದ ಯೋಗ ಗುರು ಬಾಬಾ ರಾಮದೇವ್
ಭವಿಷ್ಯ ಕಟ್ಟುವ ಶಿಕ್ಷಕರ ಬಗ್ಗೆ ಸರ್ಕಾರದ ಉಡಾಫೆ ಹಾಗೂ ದಿವ್ಯ ನಿರ್ಲಕ್ಷ್ಯ ಧೋರಣೆಗೆ ಧಿಕ್ಕಾರವಿರಲಿ. ಇವರು ನೀಡಿದ ಆದೇಶ ಪಾಲನೆಗೆಂದು ಹೋಗಿ ರಾಜ್ಯದ ಹಲವು ಭಾಗಗಳಲ್ಲಿ ಶಿಕ್ಷಕರು ಇಂದು ಕೊರೊನಾದಿಂದ ಬಳಲುತ್ತಿದ್ದಾರೆ. ಶಿಕ್ಷಕರ ಸಾವಿಗೆ ಸರ್ಕಾರವೇ ಹೊಣೆ. ತಕ್ಷಣ ಸರ್ಕಾರ ಶಿಕ್ಷಕರನ್ನು ಕೊರೊನಾ ವಾರಿಯರ್ಸ್ ಎಂದು ಘೋಷಿಸಿ, ತುರ್ತು ಪರಿಹಾರ ಕ್ರಮ ಕೈಗೊಳ್ಳಲಿ ಎಂದು ಒತ್ತಾಯಿಸಿದ್ದಾರೆ.