ಸರ್ಕಾರಗಳಿಂದ ಸದಾ ನಿರ್ಲಕ್ಷಕ್ಕೆ ಒಳಗಾಗುತ್ತಾ ಬಂದಿರುವ ಕಲ್ಯಾಣ ಕರ್ನಾಟಕದ ಜನತೆಗೆ ರಾಜ್ಯ ಸರ್ಕಾರ ಇದೀಗ ಮತ್ತೊಂದು ಶಾಕ್ ನೀಡಿದೆ. ಕಲಬುರಗಿಯಲ್ಲಿ ಸ್ಥಾಪಿಸಲು ಉದ್ದೇಶಿಸಲಾಗಿದ್ದ ಅಖಿಲ ಭಾರತ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಏಮ್ಸ್) ಯನ್ನು ಇದೀಗ ಹುಬ್ಬಳ್ಳಿ-ಧಾರವಾಡಕ್ಕೆ ವರ್ಗಾಯಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಕಲ್ಯಾಣ ಕರ್ನಾಟಕದ ಜನತೆಯ ಆಕ್ರೋಶ ಭುಗಿಲೆದ್ದಿದೆ.
ಕಲಬುರಗಿಯ ‘ಇಎಸ್ಐಸಿ’ ಕಟ್ಟಡದಲ್ಲಿ ಅಖಿಲ ಭಾರತ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯನ್ನು ಸ್ಥಾಪಿಸಲು ಈ ಹಿಂದೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಆದರೆ ಇದೀಗ ಏಕಾಏಕಿ ಈ ನಿರ್ಧಾರವನ್ನು ಬದಲಾಯಿಸಿ ಹುಬ್ಬಳ್ಳಿ-ಧಾರವಾಡದಲ್ಲಿ ಏಮ್ಸ್ ಸ್ಥಾಪಿಸಲು ಸ್ಥಳ ಗುರುತಿಸಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ರಾಜ್ಯ ಸರ್ಕಾರ ಮರು ಪ್ರಸ್ತಾವನೆ ಸಲ್ಲಿಸಿದೆ ಎಂದು ತಿಳಿದುಬಂದಿದೆ.
ವರನಟ ಡಾ.ರಾಜ್ ಬಿಡುಗಡೆಗೆ 15 ಕೋಟಿ ರೂ. ಪಡೆದಿದ್ದನಾ ಕಾಡುಗಳ್ಳ ವೀರಪ್ಪನ್…? ಶಿವಸುಬ್ರಮಣ್ಯಂ ಪುಸ್ತಕದಲ್ಲಿ ಸ್ಪೋಟಕ ಮಾಹಿತಿ ಬಹಿರಂಗ
ಅತ್ಯಂತ ಹಿಂದುಳಿದ ಜಿಲ್ಲೆಗಳೆಂದು ಪರಿಗಣಿಸಲ್ಪಟ್ಟಿರುವ ಕಲಬುರಗಿ, ಬೀದರ್, ಯಾದಗಿರಿ ರಾಯಚೂರು, ಬಳ್ಳಾರಿ ಮತ್ತು ಕೊಪ್ಪಳ ಜಿಲ್ಲೆಯನ್ನು ಒಳಗೊಂಡ ಕಲ್ಯಾಣ ಕರ್ನಾಟಕವನ್ನು ಈ ಹಿಂದೆ ಘೋಷಿಸಲಾಗಿದ್ದು, ಇದರ ಸಮಗ್ರ ಅಭಿವೃದ್ಧಿಗಾಗಿ ಶ್ರಮಿಸುವ ಭರವಸೆ ನೀಡಲಾಗಿತ್ತು. ಆದರೆ ಇದೀಗ ಕಲಬುರಗಿಯಲ್ಲಿ ಸ್ಥಾಪಿಸಲು ಉದ್ದೇಶಿಸಲಾಗಿದ್ದ ಅಖಿಲ ಭಾರತ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಯನ್ನು ಹುಬ್ಬಳ್ಳಿ-ಧಾರವಾಡಕ್ಕೆ ವರ್ಗಾಯಿಸಲು ತೀರ್ಮಾನ ಕೈಗೊಂಡಿರುವುದು ಕಲ್ಯಾಣ ಕರ್ನಾಟಕ ಜನತೆಯ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.