ಬೆಂಗಳೂರು: ಕಲ್ಯಾಣ ಕರ್ನಾಟಕ ಭಾಗದ ವಿದ್ಯಾರ್ಥಿಗಳಿಗೆ ಬೆಂಗಳೂರಿನ ಹೆಚ್.ಎಸ್.ಆರ್. ಲೇಔಟ್‍ನಲ್ಲಿ ಸುಸಜ್ಜಿತ ವಸತಿ ನಿಲಯ ನಿರ್ಮಾಣವಾಗಲಿದೆ. 60 ಕೋಟಿ ರೂ. ವೆಚ್ಚದಲ್ಲಿ ವಸತಿ ನಿಲಯ ನಿರ್ಮಾಣವಾಗಲಿದ್ದು, ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ ಸಿಗಲಿದೆ.
ಯುವ ಸಬಲೀಕರಣ ಮತ್ತು ಕ್ರೀಡೆ ಹಾಗೂ ಯೋಜನೆ ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವ ಸಚಿವ ಡಾ. ನಾರಾಯಣಗೌಡ ಅವರ ಅಧ್ಯಕ್ಷತೆಯಲ್ಲಿ ವಿಕಾಸ ಸೌಧದಲ್ಲಿ ನಡೆದ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಈ ಬಗ್ಗೆ ತಕ್ಷಣವೇ ಟೆಂಡರ್ ಆಹ್ವಾನಿಸಿ ಮಾರ್ಚ್ ಒಳಗೆ ಭೂಮಿ ಪೂಜೆ ನಡೆಸಲುನಿರ್ಧರಿಸಲಾಯಿತು.
ಪದೇ ಪದೇ ಮೊಬೈಲ್ ಚೆಕ್ ಮಾಡ್ಬೇಕಾಗಿಲ್ಲ, ಬಂದಿದೆ ಪೇಟಿಎಂ ಸೌಂಡ್ ಬಾಕ್ಸ್
ಇದೇ ವೇಳೆ ಪ್ರಸಕ್ತ ಸಾಲಿನ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಗೆ ಒದಗಿಸಿರುವ ಅನುದಾನದ ಪ್ರಗತಿಯನ್ನು ಪರಿಶೀಲಿಸಿ, ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಸ್ಥಾಪನೆಯಾದ ಬಳಿಕ ಇದುವರೆಗೆ 5348 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ. 2020-21 ನೇ ಸಾಲಿನಲ್ಲಿ 1131 ಕೋಟಿ ರೂಪಾಯಿ ಅನುದಾನ ಹಂಚಿಕೆಯಾಗಿದೆ. ಇತರೆ ಇಲಾಖೆಗಳು ಹಾಗೂ ವಿಶೇಷ ಅಭಿವೃದ್ಧಿ ಯೋಜನೆಯಡಿ ಹೆಚ್ಚಿನ ಅನುದಾನ ಈ ಭಾಗಕ್ಕೆ ನೀಡಲಾಗುತ್ತಿದ್ದರು ಕಣ್ಣಿಗೆ ಕಾಣುವಂತಹ ಅಭಿವೃದ್ಧಿ ಕಾರ್ಯಗಳು ಆಗದೇ ಇರುವ ಬಗ್ಗೆ ಸಚಿವರು ವಿಷಾದ ವ್ಯಕ್ತಪಡಿಸಿದರು.
ಕಳೆದ ಸಾಲಿನಲ್ಲಿ ಮಂಜೂರಾದ 4016 ಕಾಮಗಾರಿಗಳಲ್ಲಿ ಇದುವರೆಗೆ 2176 ಕಾಮಗಾರಿಗಳು ಮಾತ್ರ ಪೂರ್ಣಗೊಂಡಿವೆ. 401 ಕಾಮಗಾರಿಗಳು ಪ್ರಾರಂಭವೇ ಆಗಿಲ್ಲ. ಕೂಡಲೆ ಈ ಕಾಮಗಾರಿಗಳನ್ನು ಪ್ರಾರಂಭಿಸಬೇಕು. ಈ ಭಾಗದ ಅಭಿವೃದ್ಧಿಗೆ ಮುಖ್ಯಮಂತ್ರಿಗಳು ಪಣತೊಟ್ಟಿದ್ದಾರೆ. ಹೀಗಿರುವಾಗ ಹಂಚಿಕೆಯಾದ ಅನುದಾನ 100 ರಷ್ಟು ಬಳಕೆಯಾಗಬೇಕು. ವಿಮಾನ ನಿಲ್ದಾಣ, ರೇಲ್ವೆ ಸಂಪರ್ಕ, ಭೂ ಹೆದ್ದಾರಿಗಳು, ಹೈಟೆಕ್ ಆಸ್ಪತ್ರೆಗಳ ನಿರ್ಮಾಣ, ಕೃಷಿ ಮತ್ತು ತೋಟಗಾರಿಕೆ ಬೆಳೆಗಳ ಅತ್ಯಾಧುನಿಕ ಮಾರುಕಟ್ಟೆ ಕಾಮಗಾರಿಗಳಿಗೆ ಹೆಚ್ಚಿನ ಆಧ್ಯತೆ ನೀಡಬೇಕು ಎಂದು ಅಧಿಕಾರಿಗಳಿಗೆ ಸಚಿವರು ಸೂಚಿಸಿದರು.