ಬೆಂಗಳೂರು: ಉಪಚುನಾವಣಾ ಕಾವು ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಇದೀಗ ಐಎಎಸ್ ಅಧಿಕಾರಿ ದಿ. ಡಿ.ಕೆ. ರವಿ ಪತ್ನಿ ಕುಸುಮಾ ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ.
ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಡಿ.ಕೆ. ರವಿ ಪತ್ನಿ ಕುಸುಮಾ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸಮ್ಮುಖದಲ್ಲಿ ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದಾರೆ. ಈ ಮೂಲಕ ಆರ್.ಆರ್. ನಗರ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕುಸುಮಾ ಕಣಕ್ಕಿಳಿಯುವ ಸಾಧ್ಯತೆ ಹೆಚ್ಚಿದೆ ಎನ್ನಲಾಗಿದೆ.
ಆರ್.ಆರ್. ನಗರ ಕ್ಷೇತ್ರವನ್ನು ಪ್ರತಿಷ್ಠೆಯನ್ನಾಗಿ ಪರಿಗಣಿಸಿರುವ ಕಾಂಗ್ರೆಸ್ ಡಿ.ಕೆ. ರವಿ ಪತ್ನಿಯನ್ನು ಕಣಕ್ಕಿಳಿಸುವ ಮೂಲಕ ಅನುಕಂಪದ ಅಲೆ ಸೃಷ್ಟಿಸಿ, ಮತದಾರರನ್ನು ಸೆಳೆಯುವ ಪ್ರಯತ್ನ ಮಾಡಿದೆ ಎನ್ನಲಾಗಿದೆ.