
ಬೆಂಗಳೂರು: ಡ್ರಗ್ಸ್ ಪೆಡ್ಲರ್ ಜತೆ ಕಾಂಗ್ರೆಸ್ ಕಾರ್ಪೋರೇಟರ್ ಪುತ್ರನ ನಂಟು ಹಿನ್ನಲೆಯಲ್ಲಿ ಎನ್ ಸಿಬಿ ತಂಡ ಕಾರ್ಪೋರೇಟರ್ ಕೇಶವಮೂರ್ತಿ ಮನೆ ಮೇಲೆ ದಾಳಿ ನಡೆಸಿದ್ದು, ವಿಚಾರಣೆಗೆ ಹಾಜರಾಗುವಂತೆ ನೋಟೀಸ್ ನೀಡಿದೆ.
ಬಾಲಿವುಡ್ ನಟ ಸುಶಾಂತ್ ಸಿಂಗ್ ಆತ್ಮಹತ್ಯೆ ಪ್ರಕರಣದ ತನಿಖೆ ವೇಳೆ ಕಾರ್ಪೋರೇಟರ್ ಕೇಶವಮೂರ್ತಿ ಮಗ ಯಶಸ್ ಹೆಸರು ಕೇಳಿಬಂದಿತ್ತು. ಯಶಸ್ ಗೆ ಡ್ರಗ್ಸ್ ಪೆಡ್ಲರ್ ಜತೆ ನಂಟಿದೆ ಎಂಬ ಆರೋಪ ಹಿನ್ನಲೆಯಲ್ಲಿ ಮುಂಬೈನಿಂದ ಬಂದಿದ್ದ ಎನ್ ಸಿಬಿ ಅಧಿಕಾರಿಗಳು ಎರಡು ದಿನಗಳ ಹಿಂದೆ ಕಾರ್ಪೋರೇಟರ್ ಕೇಶವಮೂರ್ತಿವರ ರಾಜಾಜಿನಗರ ಮನೆ ಮೇಲೆ ದಾಳಿ ನಡೆಸಿದ್ದರು.
ಕಾರ್ಪೋರೇಟರ್ ಪುತ್ರ ಡಾರ್ಕ್ ನೆಟ್ ಮೂಲಕ ಡ್ರಗ್ಸ್ ಖರೀದಿಸುತ್ತಿದ್ದ ಎನ್ನಲಾಗಿದೆ. ದಾಳಿ ವೇಳೆ ಎನ್ ಸಿಬಿಗೆ ಯಾವುದೇ ಸಾಕ್ಷ್ಯ ಸಿಕ್ಕಿಲ್ಲ. ಆದರೆ ಬೆಂಗಳೂರಿನ ಎನ್ ಸಿಬಿ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗುವಂತೆ ನೋಟೀಸ್ ನೀಡಿದೆ.