alex Certify ಕಾರ್ಪೋರೇಟರ್ ಪುತ್ರನಿಗೆ ಡ್ರಗ್ಸ್ ನಂಟು; ಪಾಲಿಕೆ ಸದಸ್ಯನಿಗೆ ಎನ್ ಸಿಬಿ ನೋಟೀಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಾರ್ಪೋರೇಟರ್ ಪುತ್ರನಿಗೆ ಡ್ರಗ್ಸ್ ನಂಟು; ಪಾಲಿಕೆ ಸದಸ್ಯನಿಗೆ ಎನ್ ಸಿಬಿ ನೋಟೀಸ್

ಬೆಂಗಳೂರು: ಡ್ರಗ್ಸ್ ಪೆಡ್ಲರ್ ಜತೆ ಕಾಂಗ್ರೆಸ್ ಕಾರ್ಪೋರೇಟರ್ ಪುತ್ರನ ನಂಟು ಹಿನ್ನಲೆಯಲ್ಲಿ ಎನ್ ಸಿಬಿ ತಂಡ ಕಾರ್ಪೋರೇಟರ್ ಕೇಶವಮೂರ್ತಿ ಮನೆ ಮೇಲೆ ದಾಳಿ ನಡೆಸಿದ್ದು, ವಿಚಾರಣೆಗೆ ಹಾಜರಾಗುವಂತೆ ನೋಟೀಸ್ ನೀಡಿದೆ.

ಬಾಲಿವುಡ್ ನಟ ಸುಶಾಂತ್ ಸಿಂಗ್ ಆತ್ಮಹತ್ಯೆ ಪ್ರಕರಣದ ತನಿಖೆ ವೇಳೆ ಕಾರ್ಪೋರೇಟರ್ ಕೇಶವಮೂರ್ತಿ ಮಗ ಯಶಸ್ ಹೆಸರು ಕೇಳಿಬಂದಿತ್ತು. ಯಶಸ್ ಗೆ ಡ್ರಗ್ಸ್ ಪೆಡ್ಲರ್ ಜತೆ ನಂಟಿದೆ ಎಂಬ ಆರೋಪ ಹಿನ್ನಲೆಯಲ್ಲಿ ಮುಂಬೈನಿಂದ ಬಂದಿದ್ದ ಎನ್ ಸಿಬಿ ಅಧಿಕಾರಿಗಳು ಎರಡು ದಿನಗಳ ಹಿಂದೆ ಕಾರ್ಪೋರೇಟರ್ ಕೇಶವಮೂರ್ತಿವರ ರಾಜಾಜಿನಗರ ಮನೆ ಮೇಲೆ ದಾಳಿ ನಡೆಸಿದ್ದರು.

ಕಾರ್ಪೋರೇಟರ್ ಪುತ್ರ ಡಾರ್ಕ್ ನೆಟ್ ಮೂಲಕ ಡ್ರಗ್ಸ್ ಖರೀದಿಸುತ್ತಿದ್ದ ಎನ್ನಲಾಗಿದೆ. ದಾಳಿ ವೇಳೆ ಎನ್ ಸಿಬಿಗೆ ಯಾವುದೇ ಸಾಕ್ಷ್ಯ ಸಿಕ್ಕಿಲ್ಲ. ಆದರೆ ಬೆಂಗಳೂರಿನ ಎನ್ ಸಿಬಿ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗುವಂತೆ ನೋಟೀಸ್ ನೀಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...