alex Certify ಕಾರ್ಮಿಕರ ಕೆಲಸದ ಅವಧಿ ಹೆಚ್ಚಿಸಿದ ಸರ್ಕಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಾರ್ಮಿಕರ ಕೆಲಸದ ಅವಧಿ ಹೆಚ್ಚಿಸಿದ ಸರ್ಕಾರ

ಕೊರೊನಾ ನಿಯಂತ್ರಣಕ್ಕಾಗಿ ಲಾಕ್ಡೌನ್ ಜಾರಿಗೊಳಿಸಿದ ವೇಳೆ ಕಾರ್ಖಾನೆಗಳಿಗೆ ಉಂಟಾದ ನಷ್ಟವನ್ನು ಸರಿದೂಗಿಸಲು ಮುಂದಾಗಿರುವ ರಾಜ್ಯ ಸರ್ಕಾರ, ಕಾರ್ಮಿಕರ ಕೆಲಸದ ಅವಧಿಯನ್ನು ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ.

ಈ ಮೊದಲು ಕೆಲಸದ ಅವಧಿ ದಿನಕ್ಕೆ 8 ಗಂಟೆ ಹಾಗೂ ವಾರಕ್ಕೆ 40 ಗಂಟೆ ಇದ್ದು, ಇದನ್ನು ಈಗ ದಿನಕ್ಕೆ 10 ಗಂಟೆ ಹಾಗೂ ವಾರಕ್ಕೆ 60 ಗಂಟೆಗೆ ನಿಗದಿಪಡಿಸಲಾಗಿದೆ. ಈ ಪರಿಷ್ಕೃತ ಆದೇಶ ಮೇ 22 ರಿಂದ ಆಗಸ್ಟ್ 21 ರವರೆಗೆ ಅನ್ವಯವಾಗಲಿದೆ.

ಕಾರ್ಖಾನೆ ಮಾಲೀಕರುಗಳು ಕೆಲಸದ ಅವಧಿಯನ್ನು 12 ಗಂಟೆಗೆ ಹೆಚ್ಚಿಸಬೇಕು ಎಂದು ಸರ್ಕಾರದ ಮೇಲೆ ಒತ್ತಡ ತಂದಿದ್ದರೂ ಸಹ ಅಂತಿಮವಾಗಿ 10 ಗಂಟೆಗೆ ಇದನ್ನು ನಿಗದಿಪಡಿಸಲಾಗಿದೆ. ಈಗಾಗಲೇ ಬಹುತೇಕ ಎಲ್ಲ ಕಾರ್ಖಾನೆಗಳು ಆರಂಭವಾಗಿದ್ದು, ಸರ್ಕಾರದ ಪರಿಷ್ಕೃತ ಆದೇಶ ಜಾರಿಯಲ್ಲಿರುತ್ತದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...