alex Certify ಕಿಡ್ನಾಪ್ ಕೇಸ್: ಕೋರ್ಟ್ ಗೆ ಹಾಜರಾಗಿ ಹೇಳಿಕೆ ದಾಖಲಿಸಿದ ಸಿಡಿ ಲೇಡಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಿಡ್ನಾಪ್ ಕೇಸ್: ಕೋರ್ಟ್ ಗೆ ಹಾಜರಾಗಿ ಹೇಳಿಕೆ ದಾಖಲಿಸಿದ ಸಿಡಿ ಲೇಡಿ

ಬೆಂಗಳೂರು: ರಮೇಶ್ ಜಾರಕಿಹೊಳಿ ಸಿಡಿ ಪ್ರಕಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಯುವತಿ ಮತ್ತೆ ವಿಶೇಷ ಕೋರ್ಟ್ ಮುಂದೆ ಹಾಜರಾಗಿ ಹೇಳಿಕೆ ದಾಖಲಿಸಿದ್ದಾಳೆ.

ಯುವತಿಯ ತಂದೆ – ತಾಯಿ ತಮ್ಮ ಮಗಳು ಕಿಡ್ನಾಪ್ ಆಗಿದ್ದಾಳೆ ಎಂದು ಆರ್.ಟಿ. ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿ ಇಂದು ಗುರುನಾನಕ್ ಭವನದ ಕೋರ್ಟ್ ಗೆ ಹಾಜರಾಗಿದ್ದು, ನ್ಯಾಯಾಧೀಶರ ಮುಂದೆ ಹೇಳಿಕೆ ದಾಖಲಿಸಿದ್ದಾಳೆ.

ಉಪ ಚುನಾವಣೆಗೂ ಮುನ್ನ ಅಚ್ಚರಿ ನಿರ್ಧಾರ ಕೈಗೊಂಡ ರಮೇಶ್‌ ಜಾರಕಿಹೊಳಿ ಸಹೋದರ

ಎಸ್ ಐಟಿ ವಿಚಾರಣೆ ವೇಳೆ ಸಂತ್ರಸ್ತ ಯುವತಿ ತನ್ನನ್ನು ಯಾರೂ ಕಿಡ್ನ್ಯಾಪ್ ಮಾಡಿರಲಿಲ್ಲ ಎಂದು ಹೇಳಿಕೆ ನೀಡಿದ್ದಳು. ಈ ಹಿನ್ನೆಲೆಯಲ್ಲಿ ಇದೀಗ ನ್ಯಾಯಾಧೀಶರ ಮುಂದೆ ಏನು ಹೇಳಿಕೆ ನೀಡಲಿದ್ದಾಳೆ ಎಂಬುದು ಮಹತ್ವ ಪಡೆದುಕೊಂಡಿದ್ದು, ಸಿಆರ್ಪಿಸಿ ಸೆಕ್ಷನ್ 164 ಅಡಿಯಲ್ಲಿ ಹೇಳಿಕೆ ದಾಖಲಿಸಿದ್ದಾಳೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...