ಕಿಡ್ನಿ ದಾನ ಮಾಡಿದರೆ ಒಂದು ಕೋಟಿ ರೂಪಾಯಿ ನೀಡುವುದಾಗಿ ಜಾಲತಾಣದಲ್ಲಿ ಬಂದ ಜಾಹೀರಾತು ನೋಡಿ ಕಿಡ್ನಿ ಮಾರಾಟ ಮಾಡಲು ಮುಂದಾದ ಯುವತಿಯೊಬ್ಬರು 3.14 ಲಕ್ಷ ರೂಪಾಯಿ ಕಳೆದುಕೊಂಡಿರುವ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ.
ಮಧ್ಯಮ ವರ್ಗಕ್ಕೆ ಸೇರಿದ ಈ ಯುವತಿ ಖಾಸಗಿ ಬ್ಯಾಂಕ್ ಒಂದರಲ್ಲಿ ನೌಕರಿ ಮಾಡುತ್ತಿದ್ದು, ಇವರ ಕುಟುಂಬ ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿತ್ತು. ಇದೇ ಸಂದರ್ಭದಲ್ಲಿ ಅಂತರ್ಜಾಲದಲ್ಲಿ ಕಿಡ್ನಿ ದಾನದ ಜಾಹೀರಾತು ನೋಡಿದ ಯುವತಿ ತಮ್ಮ ಮಾಹಿತಿ ನೀಡಿದ್ದಾರೆ.
ಈ ಸಂದರ್ಭದಲ್ಲಿ ಆಕೆಯನ್ನು ಸಂಪರ್ಕಿಸಿದ ವಂಚಕ ಕಿಡ್ನಿ ದಾನ ಮಾಡಲು ಕೆಲವೊಂದು ನಿಯಮಾವಳಿಗಳನ್ನು ಪಾಲಿಸಬೇಕಾಗುತ್ತದೆ ಇದಕ್ಕೆ ಪಾವತಿಸಬೇಕಾಗಿರುವ ಕಾರಣ ಹೇಳಿ ಹಂತ ಹಂತವಾಗಿ 3.14 ಲಕ್ಷ ರೂಪಾಯಿಗಳನ್ನು ತನ್ನ ಖಾತೆಗೆ ಹಾಕಿಸಿಕೊಂಡಿದ್ದಾನೆ. ಮತ್ತೆ ಹಣ ಕೇಳಿದಾಗ ಯುವತಿಗೆ ಅನುಮಾನ ಬಂದಿದ್ದು, ಈಗ ಪೊಲೀಸರಿಗೆ ದೂರು ನೀಡಿದ್ದಾರೆ.