alex Certify ಕುತೂಹಲಕ್ಕೆ ಕಾರಣವಾಗಿದೆ ಡಾ. ವಿಜಯ ಸಂಕೇಶ್ವರ ಅವರ ‘ಪತ್ರಿಕಾ ಗೋಷ್ಠಿ’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕುತೂಹಲಕ್ಕೆ ಕಾರಣವಾಗಿದೆ ಡಾ. ವಿಜಯ ಸಂಕೇಶ್ವರ ಅವರ ‘ಪತ್ರಿಕಾ ಗೋಷ್ಠಿ’

ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ಬಿರುಸಿನ ಚಟುವಟಿಕೆಗಳು ನಡೆಯುತ್ತಿದ್ದು, ಇದರ ಮಧ್ಯೆ ಖ್ಯಾತ ಉದ್ಯಮಿ, ಮಾಜಿ ಸಂಸದ ಡಾ. ವಿಜಯ ಸಂಕೇಶ್ವರ ವಿಶೇಷ ಸುದ್ದಿಗೋಷ್ಠಿ ನಡೆಸುತ್ತಿರುವುದು ಕುತೂಹಲಕ್ಕೆ ಕಾರಣವಾಗಿದೆ.

ಇಂದು ಮಧ್ಯಾಹ್ನ 1 ಗಂಟೆಗೆ ಹುಬ್ಬಳ್ಳಿಯ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾ ಗೋಷ್ಠಿ ನಡೆಯಲಿದ್ದು, ಉದ್ಯಮ ವಲಯದಲ್ಲಿ ಅಪಾರ ಅನುಭವ ಹೊಂದಿರುವ ಅವರು ಲಾಕ್ಡೌನ್ ಕಾರಣಕ್ಕೆ ತಲೆದೋರಿರುವ ಪ್ರಸಕ್ತ ಆರ್ಥಿಕ ಪರಿಸ್ಥಿತಿಯ ಕುರಿತು ಮಾತನಾಡಲಿದ್ದಾರಾ ಎಂಬ ಪ್ರಶ್ನೆ ಮೂಡಿದೆ.

ಅಥವಾ ರಾಜ್ಯ ರಾಜಕಾರಣದಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಕುರಿತು ಮಾಹಿತಿ ನೀಡಲಿದ್ದಾರಾ ಎಂಬ ಪ್ರಶ್ನೆಯೂ ಮೂಡಿದ್ದು, ಪತ್ರಿಕಾ ಗೋಷ್ಠಿ ಬಳಿಕ ಈ ಕುತೂಹಲಗಳಿಗೆ ತೆರೆಬೀಳಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...