ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಏಕಾಏಕಿ ಬೆಂಗಳೂರಿನ ದೇವನಹಳ್ಳಿ ಬಳಿಯ ರೆಸಾರ್ಟ್ ಗೆ ಭೇಟಿ ನೀಡಿದ್ದು, ಇದೀಗ ಹಲವು ಕುತೂಹಲಗಳಿಗೆ ಕಾರಣವಾಗಿದೆ.
ಸಿಎಂ ಯಡಿಯೂರಪ್ಪ, ಯಾವುದೇ ಬೆಂಗಾವಲು ಪಡೆ ಕೂಡ ಇಲ್ಲದೇ ಖಾಸಗಿ ವಾಹನದಲ್ಲಿ ದೇವನಹಳ್ಳಿ ಬಳಿಯ ಪ್ರೆಸ್ಟೀಜ್ ಗಾಲ್ಫ್ ಶೈರ್ ರೆಸಾರ್ಟ್ ಗೆ ಭೇಟಿ ನೀಡಿದ್ದಾರೆ.
ರೆಸಾರ್ಟ್ ಮೂಲಗಳ ಪ್ರಕಾರ ಯಡಿಯೂರಪ್ಪನವರು ರೆಸಾರ್ಟ್ ನಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ ಎನ್ನಲಾಗಿದೆ. ಆದರೆ ಇತ್ತೀಚೆಗೆ ರಾಜ್ಯ ರಾಜಕೀಯದಲ್ಲಿನ ದಿನಕ್ಕೊಂದು ಬೆಳವಣಿಗೆ ಬೆನ್ನಲ್ಲೇ ಮುಖ್ಯಮಂತ್ರಿಗಳು ದಿಢೀರ್ ರೆಸಾರ್ಟ್ ಗೆ ತೆರಳಿರುವುದು ಅಚ್ಚರಿಗೆ ಕಾರಣವಾಗಿದೆ.