ಕುವೆಂಪು ವಿಶ್ವವಿದ್ಯಾನಿಲಯದ ಸ್ನಾತಕ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಬಹು ಮುಖ್ಯವಾದ ಮಾಹಿತಿಯೊಂದು ಇಲ್ಲಿದೆ. ಸೆಮಿಸ್ಟರ್ ಪರೀಕ್ಷೆಯ ಶುಲ್ಕ ಪಾವತಿಸುವ ಅವಧಿಯನ್ನು ವಿಸ್ತರಿಸಲಾಗಿದ್ದು, ಜುಲೈ 7ರ ವರೆಗೆ ಕಾಲಾವಕಾಶ ನೀಡಲಾಗಿದೆ.
ಈ ಮೊದಲು ಸ್ನಾತಕೋತ್ತರ ಪದವಿ ಪರೀಕ್ಷೆ ಶುಲ್ಕ ಭರಿಸಲು ಜೂನ್ 23 ಕೊನೆಯ ದಿನಾಂಕ ಎಂದು ತಿಳಿಸಲಾಗಿದ್ದು, ಕೊರೊನಾ ಸೋಂಕು ಹಿನ್ನೆಲೆಯಲ್ಲಿ ಈ ದಿನಾಂಕವನ್ನು ಈಗ ವಿಸ್ತರಿಸಲಾಗಿದೆ.
ವಿದ್ಯಾರ್ಥಿಗಳು ಪರೀಕ್ಷಾ ಶುಲ್ಕ ಪಾವತಿಸಲು ತಾಂತ್ರಿಕ ಅಥವಾ ಇನ್ನಿತರೆ ಸಮಸ್ಯೆಯನ್ನು ಎದುರಿಸುತ್ತಿದ್ದರೆ ವಿವಿಯ ಪರೀಕ್ಷಾಂಗ ಕುಲಸಚಿವರ ಅನುಮತಿ ಮೇರೆಗೆ ಶುಲ್ಕ ಪಾವತಿಸಬಹುದಾಗಿದೆ ಎಂದು ತಿಳಿಸಲಾಗಿದೆ. ಪರೀಕ್ಷೆ ನಡೆಸಲು ವಿಶ್ವವಿದ್ಯಾಲಯ ಎಲ್ಲ ಸಿದ್ಧತೆ ನಡೆಸಿದ್ದು, ಸರ್ಕಾರದ ಸೂಚನೆ ಬಂದ ಬಳಿಕ ಪರೀಕ್ಷೆ ನಡೆಸಲಾಗುತ್ತದೆ. ಹೀಗಾಗಿ ಪರೀಕ್ಷಾ ಶುಲ್ಕ ಪಾವತಿಸಬೇಕಿದ್ದು, ಈ ವಿಚಾರದ ಕುರಿತಂತೆ ಯಾವುದೇ ಗೊಂದಲ ಬೇಡ ಎಂದು ಪರೀಕ್ಷಾಂಗ ಕುಲಸಚಿವ ಪ್ರೊ. ಎಂ. ವೆಂಕಟೇಶ್ವರಲು ತಿಳಿಸಿದ್ದಾರೆ.