alex Certify ಕುಸುಮಾ ವಿರುದ್ಧ ‘FIR’: ಕುಮಾರಸ್ವಾಮಿ ಹೇಳಿದ್ದೇನು….? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕುಸುಮಾ ವಿರುದ್ಧ ‘FIR’: ಕುಮಾರಸ್ವಾಮಿ ಹೇಳಿದ್ದೇನು….?

ಬೆಂಗಳೂರು: ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ವಿರುದ್ಧ ಎಫ್ ಐ ಆರ್ ದಾಖಲಿಸಿರುವುದರಲ್ಲಿ ರಾಜಕೀಯ ಅರ್ಥ ಕಲ್ಪಿಸುವ ಅಗತ್ಯವಿಲ್ಲ. ಅವರು ನಿಯಮ ಉಲ್ಲಂಘನೆ ಮಾಡಿದ್ದರಿಂದ ಅವರ ವಿರುದ್ಧ ಎಫ್ ಐ ಆರ್ ದಾಖಲಿಸಲಾಗಿದೆ ಎಂದು ಮಾಜಿ ಸಿಎಂ ಹೆಚ್. ಡಿ . ಕುಮಾರಸ್ವಾಮಿ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಕೊರೊನಾ ಹಿನ್ನೆಲೆಯಲ್ಲಿ ನಾಮಪತ್ರ ಸಲ್ಲಿಸುವ ವೇಳೆ ಮೂರು ಜನರಿಗೆ ಮಾತ್ರ ಅವಕಾಶ ನೀಡಲಾಗಿತ್ತು. ಆದರೆ ಕಾಂಗ್ರೆಸ್ ನವರು ಈ ನಿಯಮ ಗಾಳಿಗೆ ತೂರಿ, ಕಾನೂನು ಉಲ್ಲಂಘನೆ ಮಾಡಿದ್ದಾರೆ. ಹೀಗಾಗಿ ಕುಸುಮಾ ವಿರುದ್ಧ ಕೇಸ್ ದಾಖಲಾಗಿದೆ. ಇದಕ್ಕೆ ರಾಜಕೀಯ ಅರ್ಥ ಕಲ್ಪಿಸುವ ಅಗತ್ಯವಿಲ್ಲ ಎಂದರು.

ಕೆಪಿಸಿಸಿ ಅಧ್ಯಕ್ಷ ಡಿ. ಕೆ .ಶಿವಕುಮಾರ್ ಅವರು ಕಾಂಗ್ರೆಸ್ ಕಾರ್ಯಕರ್ತರನ್ನು ಹೆದರಿಸುವ ನಿಟ್ಟಿನಲ್ಲಿ ಈ ರೀತಿ ಕೇಸ್ ದಾಖಲಿಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ಆದರೆ ಕಾಂಗ್ರೆಸ್ ಸರ್ಕಾರ ಇದ್ದಾಗ ಕಾನೂನಾತ್ಮಕವಾಗಿ ಹೇಗೆ ನಡೆದುಕೊಂಡಿದ್ದಾರೆ. ಎಷ್ಟರ ಮಟ್ಟಿಗೆ ಪಾರದರ್ಶಕವಾಗಿ ಚುನಾವಣೆ ಎದುರಿಸಿದ್ದಾರೆ. ಕಾರ್ಯಕರ್ತರನ್ನು ಹೇಗೆ ಹೆದರಿಸಿದ್ದರು ಎಂಬುದನ್ನು ಅವರೇ ಅವಲೋಕಿಸಿದರೆ ಗೊತ್ತಾಗುತ್ತದೆ ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...