ಕೃಷಿಕರಿಗೆ ರಾಜ್ಯ ಸರ್ಕಾರ ಭರ್ಜರಿ ಗುಡ್ ನ್ಯೂಸ್ ನೀಡಿದೆ. ರೈತರು ಬಿತ್ತನೆ ಬೀಜ, ಗೊಬ್ಬರ, ಮಣ್ಣು ಪರೀಕ್ಷೆಗೆಂದು ಜಿಲ್ಲಾ ಕೇಂದ್ರಕ್ಕೆ ಬರುವುದನ್ನು ತಪ್ಪಿಸಲು ಕೃಷಿ ಮೊಬೈಲ್ ಹೆಲ್ತ್ ಕ್ಲಿನಿಕ್ ಆರಂಭಿಸಲು ಮುಂದಾಗಿದೆ.
ಕೃಷಿ ಸಚಿವ ಬಿ.ಸಿ. ಪಾಟೀಲ್ ಕೊಪ್ಪಳದಲ್ಲಿ ಈ ವಿಷಯ ತಿಳಿಸಿದ್ದು, ಆರಂಭಿಕ ಹಂತದಲ್ಲಿ ಶೀಘ್ರವೇ ಕೊಪ್ಪಳದಲ್ಲಿ ಪ್ರಾಯೋಗಿಕವಾಗಿ ಈ ಕೃಷಿ ಮೊಬೈಲ್ ಹೆಲ್ತ್ ಕ್ಲಿನಿಕ್ ಆರಂಭವಾಗಲಿದೆ ಎಂದು ತಿಳಿಸಿದ್ದಾರೆ.
108 ಅಂಬುಲೆನ್ಸ್ ಮಾದರಿಯಲ್ಲಿ ಈ ಕ್ಲಿನಿಕ್ ಕಾರ್ಯ ನಿರ್ವಹಿಸಲಿದ್ದು, ಪ್ರತಿ ರೈತ ಸಂಪರ್ಕ ಕೇಂದ್ರಕ್ಕೆ ಒಂದರಂತೆ ಇದನ್ನು ನೀಡಲು ಉದ್ದೇಶಿಸಲಾಗಿದೆ ಎಂದು ಸಚಿವ ಬಿ.ಸಿ. ಪಾಟೀಲ್ ಹೇಳಿದ್ದಾರೆ.