ಕೃಷಿಕರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿಯೊಂದನ್ನು ನೀಡಿದೆ. ಕರ್ನಾಟಕ ರಾಜ್ಯ ಉಗ್ರಾಣ ನಿಗಮದಲ್ಲಿ ಉತ್ಪನ್ನಗಳನ್ನು ದಾಸ್ತಾನು ಮಾಡುವ ಕೃಷಿಕರಿಗೆ ಸಂಗ್ರಹಣಾ ಶುಲ್ಕದಲ್ಲಿ ಶೇ.20 ರಷ್ಟು ರಿಯಾಯಿತಿ ಸಿಗಲಿದೆ.
ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಈ ವಿಷಯವನ್ನು ತಿಳಿಸಿದ್ದು, ಪರಿಶಿಷ್ಟರಿಗೆ ಶೇಕಡ 25ರಷ್ಟು ರಿಯಾಯಿತಿ ನೀಡಲು ತೀರ್ಮಾನಿಸಲಾಗಿದ್ದು, ರಾಜ್ಯಾದ್ಯಂತ ಇರುವ ಉಗ್ರಾಣ ಕೇಂದ್ರಗಳಲ್ಲಿ ಗಣಕೀಕರಣ ವ್ಯವಸ್ಥೆ ಮಾಡಲಾಗಿದೆ. ಜೊತೆಗೆ ಆನ್ಲೈನ್ ವ್ಯವಸ್ಥೆ ಸಹ ಇರಲಿದೆ ಎಂದು ತಿಳಿಸಿದರು.
BIG NEWS: ಮೀಸಲಾತಿ ಹೋರಾಟನಿರತರಿಗೆ ಸಿಹಿ ಸುದ್ದಿ, ಸಂಪುಟ ಸಭೆಯಲ್ಲಿ ಮಹತ್ವದ ಚರ್ಚೆ
ಸಹಕಾರ ಇಲಾಖೆಯಡಿ ಕಾರ್ಯನಿರ್ವಹಿಸುವ ರಾಜ್ಯ ಉಗ್ರಾಣ ನಿಗಮದಲ್ಲಿ ರಾಜ್ಯ ಹೊಂದಿರುವಷ್ಟೇ ಪಾಲನ್ನು ಕೇಂದ್ರ ಸರ್ಕಾರ ಕೂಡ ಹೊಂದಿದೆ. ರೈತರ ಉಪಯೋಗಕ್ಕಾಗಿ ಸ್ಥಾಪನೆಯಾಗಿರುವ ಇದರಿಂದ ಕೋಟ್ಯಾಂತರ ಕೃಷಿಕರಿಗೆ ಅನುಕೂಲವಾಗಲಿದೆ ಎಂದರು.