ಕೃಷಿ ಭೂಮಿ ಖರೀದಿಸುವವರಿಗೆ ರಾಜ್ಯ ಸರ್ಕಾರ ಭರ್ಜರಿ ಸಿಹಿ ಸುದ್ದಿ ನೀಡಿದೆ. ಇನ್ನು ಮುಂದೆ ಯಾರು ಬೇಕಾದರೂ ಕೃಷಿ ಭೂಮಿ ಖರೀದಿಸಲು ಅನುವಾಗುವಂತೆ ಕಾಯ್ದೆಯಲ್ಲಿ ಬದಲಾವಣೆ ಮಾಡಲಾಗಿದೆ.
ಕಂದಾಯ ಸಚಿವ ಆರ್. ಅಶೋಕ್ ಇಂದು ಈ ವಿಷಯ ತಿಳಿಸಿದ್ದು, ಈವರೆಗೆ ಕೃಷಿಕರಲ್ಲದವರು ಕೃಷಿ ಭೂಮಿ ಖರೀದಿಸಲು ಹಲವು ತೊಡಕುಗಳಿತ್ತು. ಇದೀಗ ಕಾಯ್ದೆಯಲ್ಲಿ ಬದಲಾವಣೆ ಮಾಡಿರುವ ಕಾರಣ ಯಾರು ಬೇಕಾದರೂ ಕೃಷಿ ಭೂಮಿ ಖರೀದಿಸಬಹುದಾಗಿದೆ ಎಂದು ಹೇಳಿದ್ದಾರೆ.
ಅಲ್ಲದೆ ಕೃಷಿ ಭೂಮಿ ಖರೀದಿಸಲು ಯಾವುದೇ ಆದಾಯದ ಲಿಮಿಟ್ ಇಲ್ಲವೆಂದು ತಿಳಿಸಲಾಗಿದ್ದು, ಹೀಗಾಗಿ ಕೃಷಿಯಲ್ಲಿ ಆಸಕ್ತಿ ಹೊಂದಿರುವ ವ್ಯಕ್ತಿಗಳು ಯಾವುದೇ ತೊಡಕಿಲ್ಲದೆ ಕೃಷಿ ಭೂಮಿಯನ್ನು ಖರೀದಿಸಬಹುದಾಗಿದೆ.