alex Certify ಕೆಎಂಎಫ್ ನೌಕರರಿಗೆ ಇಲ್ಲಿದೆ ಒಂದು ಸಿಹಿ ಸುದ್ದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೆಎಂಎಫ್ ನೌಕರರಿಗೆ ಇಲ್ಲಿದೆ ಒಂದು ಸಿಹಿ ಸುದ್ದಿ

ರಾಜ್ಯದಲ್ಲಿ ಕೊರೊನಾ ಮಹಾಮಾರಿ ಆರ್ಭಟಿಸುತ್ತಿದ್ದು, ಇದರ ಮಧ್ಯೆಯೂ ಹಲವು ಇಲಾಖೆಗಳ ಸಿಬ್ಬಂದಿ ಜೀವದ ಹಂಗು ತೊರೆದು ಅಗತ್ಯ ಸೇವೆಗಳಲ್ಲಿ ತೊಡಗಿಕೊಂಡಿದ್ದಾರೆ. ಈ ಪೈಕಿ ಕೆಎಂಎಫ್ ನೌಕರರು ಸಹ ಸೇರಿದ್ದಾರೆ.

ಇದೀಗ ಈ ನೌಕರರಿಗೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸಿಹಿ ಸುದ್ದಿಯೊಂದನ್ನು ನೀಡಿದ್ದು, ಜೀವದ ಹಂಗು ತೊರೆದು ಕರ್ತವ್ಯ ನಿರ್ವಹಿಸುತ್ತಿರುವ ನೌಕರರಿಗೆ 5 ಲಕ್ಷ ರೂಪಾಯಿ ವಿಮೆ ಮಾಡಿಸಲು ತೀರ್ಮಾನಿಸಲಾಗಿದೆ ಎಂದಿದ್ದಾರೆ.

ಕೊರೊನಾ ಸೋಂಕು ದಿನೇ ದಿನೇ ಹೆಚ್ಚಳವಾಗುತ್ತಿದ್ದರೂ ಸಹ ಇದನ್ನು ಲೆಕ್ಕಿಸದೆ ಮನೆಮನೆಗೆ ನಂದಿನಿ ಹಾಲು ಹಾಗೂ ಹಾಲಿನ ಉತ್ಪನ್ನಗಳನ್ನು ಸಂಸ್ಥೆಯ ನೌಕರರು ತಲುಪಿಸುತ್ತಿದ್ದಾರೆ. ಹೀಗಾಗಿ ಇವರುಗಳಿಗೆ ಕೋವಿಡ್ ಆರೋಗ್ಯ ವಿಮೆ ಮಾಡಿಸಲು ನಿರ್ಧರಿಸಲಾಗಿದೆ ಎಂದು ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...