ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಸಿಬಿಐ ಅಧಿಕಾರಿಗಳು ಸಮನ್ಸ್ ನೀಡಿದ್ದು, ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ.
ಡಿ.ಕೆ.ಶಿವಕುಮಾರ್ ಅವರ ಮಗಳ ನಿಶ್ಚಿತಾರ್ಥದ ದಿನವೇ ಸಿಬಿಐ ಅಧಿಕಾರಿಗಳು ಡಿಕೆಶಿಗೆ ನೋಟೀಸ್ ನೀಡಿದ್ದು, ನ.23ಕ್ಕೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ.
ಅ.5ರಂದು ಡಿಕೆಶಿ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದರು. ಇದೇ ವಿಚಾರವಾಗಿ ಈಗ ಸಮನ್ಸ್ ಜಾರಿ ಮಾಡಲಾಗಿದೆ ಎನ್ನಲಾಗಿದೆ.
ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿರುವ ಡಿ.ಕೆ.ಶಿವಕುಮಾರ್, ಸಿಬಿಐ ಸಮನ್ಸ್ ನೀಡಿದ್ದು ನಿಜ. ನ.23ರಕ್ಕೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ. ಆದರೆ ನ.23 ಹಾಗೂ 24ರಂದು ನಾನು ಮಸ್ಕಿಗೆ ತೆರಳುತ್ತಿರುವುದರಿಂದ ಅಂದು ವಿಚಾರಣೆಗೆ ಹಾಜರಾಗಲು ಸಾಧ್ಯವಿಲ್ಲ. ಹಾಗಾಗಿ ನ.25ಕ್ಕೆ ವಿಚಾರಣೆಗೆ ಹಾಜರಾಗುವುದಾಗಿ ಅಧಿಕಾರಿಗಳಿಗೆ ತಿಳಿಸಿದ್ದೇನೆ ಎಂದು ಹೇಳಿದರು.