
ಮಂಡ್ಯ: ಕೆ.ಆರ್.ಎಸ್. ಜಲಾಶಯ ಸಂಪೂರ್ಣ ಭರ್ತಿಯಾಗಿದ್ದು, ಸಂಪ್ರದಾಯದಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು ಕಾವೇರಿಗೆ ಬಾಗಿನ ಸಮರ್ಪಣೆ ಮಾಡಿದ್ದಾರೆ.
ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದ ಕೆ.ಆರ್.ಎಸ್. ಗೆ ಆಗಮಿಸಿದ ಸಿಎಂ ಯಡಿಯೂರಪ್ಪ ಬಾಗಿನ ಅರ್ಪಿಸಿದರು.
ಸಂಸದರುಗಳಾದ ಸುಮಲತಾ, ಪ್ರತಾಪ್ ಸಿಂಹ, ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಮೊದಲಾದವರು ಸಾಥ್ ನೀಡಿದರು.
ಈ ನಡುವೆ ಕೊರೊನಾ ಸೋಂಕಿನಂತಹ ಕಠಿಣ ಸಂದರ್ಭದಲ್ಲಿ ಅದರಲ್ಲಿಯೂ ಜಿಲ್ಲಾ ಎಸ್.ಪಿ. ರಿಷ್ಯಂತ್ ಹಾಗೂ ಸಂಸದ ಶ್ರೀನಿವಾಸ್ ಪ್ರಸಾದ್ ಸೇರಿದಂತೆ ಅಧಿಕಾರಿಗಳು – ಜನಪ್ರತಿನಿಧಿಗಳು ಸೋಂಕಿನಿಂದ ಬಳಲುತ್ತಿದ್ದಾರೆ. ಈ ಸಂದರ್ಭದಲ್ಲಿ ಸಿಎಂ ಬಾಗಿನ ಕಾರ್ಯಕ್ರಮ ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿ ಕಪ್ಪು ಬಾವುಟ ಪ್ರದರ್ಶಿಸಲು ಮುಂದಾದ ಹಲವಾರು ರೈತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಮುಂಜಾಗೃತಾ ಕ್ರಮವಾಗಿ ಕೆ.ಆರ್.ಎಸ್. ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.