ಪ್ರಧಾನಿ ನರೇದ್ರ ಮೋದಿಯವರು ಇಂದು ಜಗತ್ತಿನ ಅತಿ ದೊಡ್ಡ ಲಸಿಕಾ ನೀಡಿಕೆ ಅಭಿಯಾನಕ್ಕೆ ಭಾರತದಲ್ಲಿ ಚಾಲನೆ ನೀಡಿದ್ದು, ಕರ್ನಾಟಕದಲ್ಲೂ ಈಗ ಲಸಿಕೆ ನೀಡಲಾಗುತ್ತಿದೆ.
ಬೆಂಗಳೂರಿನ ಕೆ.ಸಿ.ಜನರಲ್ ಆಸ್ಪತ್ರೆಯ ಡಿ ಗ್ರೂಪ್ ನೌಕರ ಚಂದ್ರಶೇಖರ್, ರಾಜ್ಯದಲ್ಲಿ ಕೊರೊನಾ ಲಸಿಕೆ ಪಡೆದ ಮೊದಲ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರಿಗೆ ಕೊರೊನಾ ಲಸಿಕೆ ನೀಡಲಾಗುತ್ತಿದ್ದು, ಕರ್ನಾಟಕದ ಒಟ್ಟು 243 ಕೇಂದ್ರಗಳಲ್ಲಿ ಇದಕ್ಕೆ ಸಿದ್ದತೆಯನ್ನು ಮಾಡಿಕೊಳ್ಳಲಾಗಿದೆ.
ಎರಡನೇ ಹಂತದಲ್ಲಿ ಪೊಲೀಸರು, ಕಂದಾಯ ಇಲಾಖೆ ನೌಕರರು ಮತ್ತು ಇತರೆ ವಾರಿಯರ್ ಗಳಿಗೆ ಲಸಿಕೆ ನೀಡಲಾಗುತ್ತದೆ. ಮೂರನೇ ಹಂತದಲ್ಲಿ 50 ವರ್ಷ ಮೇಲ್ಪಟ್ಟವರು ಮತ್ತು ತೀವ್ರತರವಾದ ಕಾಯಿಲೆಯಿಂದ ಬಳಲುತ್ತಿರುವವರಿಗೆ ಲಸಿಕೆ ನೀಡಲಾಗುತ್ತದೆ.