ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರಿಗೆ ಕೊರೊನಾ ಸೋಂಕು ತಗುಲಿದ್ದು, ಸ್ವತಃ ಸಚಿವರೇ ಸಾಮಾಜಿಕ ಜಾಲತಾಣದ ಮೂಲಕ ಈ ವಿಷಯವನ್ನು ಖಚಿತಪಡಿಸಿದ್ದಾರೆ.
ಮಂಗಳವಾರದಂದು ಹೈದರಾಬಾದ್ ಮೂಲಕ ಬೆಳಗಾವಿಗೆ ಆಗಮಿಸಿದ್ದ ಅವರು ಬಳಿಕ ಹುಬ್ಬಳ್ಳಿಯ ತಮ್ಮ ನಿವಾಸಕ್ಕೆ ತೆರಳಿದ್ದರು.
ಬುಧವಾರದಂದು ಕೊರೊನಾ ಪರೀಕ್ಷೆ ಮಾಡಿಸಿಕೊಂಡಿದ್ದು, ಈ ವೇಳೆ ಸೋಂಕು ದೃಢಪಟ್ಟಿದೆ. ಯಾವುದೇ ರೋಗಲಕ್ಷಣ ಇಲ್ಲದಿದ್ದರೂ ಸಹ ವೈದ್ಯರ ಸಲಹೆ ಮೇರೆಗೆ ಪ್ರಹ್ಲಾದ್ ಜೋಷಿ ಹೋಂ ಕ್ವಾರಂಟೈನ್ ನಲ್ಲಿದ್ದಾರೆ.