ಕೊರೊನಾ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ಲಾಕ್ ಡೌನ್ ಜಾರಿಗೊಳಿಸಿದ ಕಾರಣ ಕಳೆದ ಎರಡೂವರೆ ತಿಂಗಳಿಗೂ ಅಧಿಕ ಕಾಲದಿಂದ ಹೋಟೆಲ್, ರೆಸ್ಟೋರೆಂಟ್, ರೆಸಾರ್ಟ್ ಗಳು ಬಂದ್ ಆಗಿದ್ದವು.
ಈಗ ಲಾಕ್ಡೌನ್ ನಲ್ಲಿ ಸಡಿಲಿಕೆ ಮಾಡಿರುವ ಕಾರಣ ಹೋಟೆಲ್, ರೆಸ್ಟೋರೆಂಟ್, ರೆಸಾರ್ಟ್ ಗಳು ಆರಂಭವಾಗಿವೆ. ಆದರೆ ಚಿತ್ರಮಂದಿರ, ಜಿಮ್ ಹಾಗೂ ಸಾರ್ವಜನಿಕ ಸಭೆ ಸಮಾರಂಭಗಳಿಗೆ ಅವಕಾಶ ನೀಡಲಾಗಿಲ್ಲ.
ಸಾರ್ವಜನಿಕ ಸಭೆ ಸಮಾರಂಭಗಳು ಇಲ್ಲದಿರುವ ಕಾರಣ ರಾಜಕಾರಣಿಗಳು ಬಿಡುವಾಗಿದ್ದಾರೆ. ಇದರ ಮಧ್ಯೆ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ತಮ್ಮ ಕುಟುಂಬಸ್ಥರೊಂದಿಗೆ ಕೊಡಗಿನ ಪ್ರತಿಷ್ಠಿತ ತಾಜ್ ರೆಸಾರ್ಟ್ನಲ್ಲಿ ವಾಸ್ತವ್ಯ ಹೂಡಿದ್ದಾರೆಂದು ತಿಳಿದುಬಂದಿದೆ.