alex Certify ಕೊರೊನಾಗೆ ಬಲಿಯಾದ ಪತಿ; ಆತ್ಮಹತ್ಯೆಗೆ ಶರಣಾದ ಪತ್ನಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೊರೊನಾಗೆ ಬಲಿಯಾದ ಪತಿ; ಆತ್ಮಹತ್ಯೆಗೆ ಶರಣಾದ ಪತ್ನಿ

ಮಂಡ್ಯ: ಕ್ರೂರಿ ಕೊರೊನಾ ಅಟ್ಟಹಾಸ ಕುಟುಂಬಗಳನ್ನೇ ಬಲಿ ಪಡೆಯುತ್ತಿದೆ. ಕೊರೊನಾ ಸೋಂಕಿನಿಂದ ಪತಿ ಮೃತಪಟ್ಟ ಬೆನ್ನಲ್ಲೇ ಮನನೊಂದ ಪತ್ನಿ ಆತ್ಮಹತ್ಯೆಗೆ ಶರಣಾಗಿರುವ ಹೃದಯವಿದ್ರಾವಕ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ನಡೆದಿದೆ.

ನಾಗಮಂಗಲದ ಬೊಮ್ಮೇನಹಳ್ಳಿಯಲ್ಲಿ ಈ ದುರಂತ ಸಂಭವಿಸಿದೆ. ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ಪತಿ ಕಿರಣ್ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದರು. ಪತಿಯ ಅಂತ್ಯಕ್ರಿಯೆ ಮುಗಿಸಿ ಮನೆಗೆ ವಾಪಸ್ ಆದ ಪತ್ನಿ ಪೂಜಾ, ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಕಿರಣ್ ಹಾಗೂ ಪೂಜಾ 11 ತಿಂಗಳ ಹಿಂದಷ್ಟೇ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಪತಿ-ಪತ್ನಿಯ ದುರಂತ ಅಂತ್ಯಕ್ಕೆ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...