ರಾಜ್ಯದಲ್ಲಿ ಕೊರೊನಾ ಎರಡನೇ ಅಲೆ ತೀವ್ರವಾಗುತ್ತಿದ್ದು, ಆದರೆ ಇದನ್ನು ಗಂಭೀರವಾಗಿ ಪರಿಗಣಿಸದ ಸಾರ್ವಜನಿಕರು ಮಾಸ್ಕ್ ಧರಿಸದೆ, ಸಾಮಾಜಿಕ ಅಂತರ ಕಾಪಾಡಿಕೊಳ್ಳದೆ ನಿರ್ಲಕ್ಷ್ಯ ವಹಿಸುತ್ತಿದ್ದಾರೆ. ಹೀಗಾಗಿಯೇ ಸರ್ಕಾರ ಕಠಿಣ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದೆ.
ಕೊರೊನಾ ಸೋಂಕು ಹೆಚ್ಚಳದ ಜೊತೆಗೆ ಇದು ಯುವಜನತೆಯನ್ನು ಹೆಚ್ಚಾಗಿ ಬಾಧಿಸುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೊಳಗಾಗಿದ್ದ 36 ವರ್ಷದ ಯುವಕನೊಬ್ಬ ಗುಣಮುಖನಾಗಿ ಆಸ್ಪತ್ರೆಯಿಂದ ಬಿಡುಗಡೆಯಾದ ಬಳಿಕ ಸಾವನ್ನಪ್ಪಿರುವ ಘಟನೆ ನಡೆದಿದೆ.
ದೇಶದಲ್ಲಿ ‘ಕೊರೊನಾ’ ಹೆಚ್ಚಳವಾಗುತ್ತಿರುವ ಬೆನ್ನಲ್ಲೇ ಕೇಂದ್ರ ಸರ್ಕಾರದಿಂದ ಮಹತ್ವದ ಕ್ರಮ
ಸೊರಬ ತಾಲೂಕಿನ ಆನವಟ್ಟಿಯ ಈ ಯುವಕ ಏಪ್ರಿಲ್ 2ರಂದು ಕೊರೊನಾ ಸೋಂಕಿಗೊಳಗಾಗಿದ್ದು, ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆದುಕೊಂಡಿದ್ದ. ಏಪ್ರಿಲ್ 8ರಂದು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಮನೆಯಲ್ಲಿ ವಿಶ್ರಾಂತಿ ಪಡೆಯುವಂತೆ ಸೂಚಿಸಲಾಗಿತ್ತು.
ಆದರೆ ಶನಿವಾರದಂದು ಈ ಯುವಕ ಏಕಾಏಕಿ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಆತ ವಿಶ್ರಾಂತಿ ಪಡೆಯದೆ ಬಿಸಿಲಿನಲ್ಲಿ ಕೆಲಸ ಮಾಡಿದ್ದ ಕಾರಣ ಸುಸ್ತಾಗಿ ಕುಸಿದು ಮೃತಪಟ್ಟಿರುವುದಾಗಿ ಆರೋಗ್ಯ ಇಲಾಖೆ ಮೂಲಗಳು ತಿಳಿಸಿವೆ.