ಮೈಸೂರು: ರಾಜ್ಯದಲ್ಲಿ ಕೊರೊನಾ ಮಾಹಾಮಾರಿ ಅಟ್ಟಹಾಸ ಮುಂದುವರೆದಿದೆ. ಶಾಲೆಗಳು ಆರಂಭವಾಗಿರುವುದು ಕೂಡ ವಿದ್ಯಾರ್ಥಿಗಳಲ್ಲಿ ಸೋಂಕು ಹರಡಲು ಕಾರಣವಾಗಿದೆ.
ಮೈಸೂರು ಜಿಲ್ಲೆಯ ಬನ್ನೂರಿನಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ 18 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ. 9-10ನೇ ತರಗತಿಯ 18 ವಿದ್ಯಾರ್ಥಿಗಳಲ್ಲಿ ಸೋಂಕು ಪತ್ತೆಯಾಗಿದ್ದು, ಎಲ್ಲಾ ವಿದ್ಯಾರ್ಥಿಗಳನ್ನು ಕ್ವಾರಂಟೈನ್ ಮಾಡಲಾಗಿದೆ.
1,17,34,058ಕ್ಕೆ ಏರಿಕೆಯಾದ ಕೋವಿಡ್ ಸೋಂಕಿತರ ಸಂಖ್ಯೆ – 24 ಗಂಟೆಯಲ್ಲಿ ಸಾವಿನ ಸಂಖ್ಯೆಯಲ್ಲೂ ಹೆಚ್ಚಳ
ಇನ್ನೊಂದೆಡೆ ಬಾಗಲಕೋಟೆ ಜಿಲ್ಲೆಯ ಮಾರವಾಡಿ ಗಲ್ಲಿಯ ಒಂದೇ ಕುಟುಂಬದ 11 ಜನರಲ್ಲಿ ಸೋಂಕು ದೃಢಪಟ್ಟಿದೆ. ಒಟ್ಟಾರೆ ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪ್ರಕರಣಗಳು ಹೆಚ್ಚುತ್ತಿದ್ದು, ಎರಡನೇ ಅಲೆ ದೊಡ್ಡ ಮಟ್ಟದಲ್ಲಿ ಆರಂಭವಾಗಿದೆಯೇ ಎಂಬ ಆತಂಕ ಶುರುವಾಗಿದೆ.