ಮೈಸೂರು: ಕೊರೊನಾ ಎರಡನೇ ಅಲೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ವೈದ್ಯಕೀಯ ಪರೀಕ್ಷೆಗಳನ್ನು ಎರಡು ತಿಂಗಳ ಕಾಲ ಮುಂದೂಡಲಾಗಿದೆ ಎಂದು ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ತಿಳಿಸಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಸಚಿವರು, ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವುದರಿಂದ ವೈದ್ಯಕೀಯ ಶಿಕ್ಷಣದ ಅಂತಿಮ ವರ್ಷದ ವಿದ್ಯಾರ್ಥಿಗಳನ್ನು ಕೋವಿಡ್ ಕೆಲಸಕ್ಕೆ ಬಳಸಿಕೊಳ್ಳಲಾಗುವುದು ಎಂದರು.
ಕೊರೊನಾ ಹೊಡೆತಕ್ಕೆ ರಾಷ್ಟ್ರವೇ ತತ್ತರ; ಪತ್ರಿಕೆಗಳಲ್ಲಿ ಪ್ರಧಾನಿ ಮೋದಿ ನಗುಮೊಗದ ಜಾಹೀರಾತು; ಪ್ರಚಾರಪ್ರಿಯ ಸರ್ಕಾರದ ವಿರುದ್ಧ ಹೆಚ್.ಡಿ.ಕೆ. ಕಿಡಿ
ಕೊರೊನಾ ಹಿನ್ನೆಲೆಯಲ್ಲಿ ವೈದ್ಯಕೀಯ ಮಾತ್ರವಲ್ಲ, ಪದವಿ, ಸ್ನಾತಕೋತ್ತರ, ಎಂಜಿನಿಯರಿಂಗ್ ಸೇರಿದಂತೆ ಎಲ್ಲಾ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಹೇಳಿದರು.