ಮೈಸೂರು: ರಾಜ್ಯದಲ್ಲಿ ಕೊರೊನಾ ಎರಡನೇ ಅಲೆ ಹೆಚ್ಚುತ್ತಿದೆ. ಸೋಂಕಿತರ ಸಂಖ್ಯೆ ಏರಿಕೆಯಾಗುವುದರ ಜೊತೆಗೆ ಸಾವಿನ ಸಂಖ್ಯೆಯೂ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿರುವ ಸಂಸದ ಪ್ರತಾಪ್ ಸಿಂಹ, ಕೋವಿಡ್ ವಿಚಾರದಲ್ಲಿ ಆರಂಭ ದಿನಗಳಲ್ಲಿ ಸರ್ಕಾರ ಹಾಗೂ ಜನಪ್ರತಿನಿಧಿಗಳು ಮೈ ಮರೆತಿದ್ದು ನಿಜ ಎಂದು ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿದೆ. ಎರಡನೇ ಅಲೆಯನ್ನು ಲಘುವಾಗಿ ಪರಿಗಣಿಸಿದೆವು. ಕೊರೊನಾ ನಿಯಂತ್ರಣಕ್ಕೆ ಸಿದ್ಧತೆ ವಿಳಂಬವಾದ ಹಿನ್ನೆಲೆಯಲ್ಲಿ ಇಂದು ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ ಎಂದು ಸರ್ಕಾರದ ತಪ್ಪನ್ನು ಒಪ್ಪಿಕೊಂಡಿದ್ದಾರೆ.
ಕೊರೋನಾ ಅಟ್ಟಹಾಸ: ಚುನಾವಣೆ ಕರ್ತವ್ಯ ನಿರ್ವಹಿಸಿದ 135 ಶಿಕ್ಷಕರು ಬಲಿ –ಆಯೋಗದ ವಿರುದ್ಧ ಹೈಕೋರ್ಟ್ ಕೆಂಡ
ಸರ್ಕಾರ ಹಾಗೂ ಜನಪ್ರತಿನಿಧಿ ಆರಂಭದಲ್ಲಿ ಮೈಮರೆತಿದ್ದು ನಿಜ. ಇದರ ನಡುವೆ ಈಗ ಸರ್ಕಾರ ತ್ವರಿತವಾಗಿ ಕೆಲಸ ಮಾಡುತ್ತಿದೆ. ಕೊರೊನಾ ನಿಯಂತ್ರಿಸಲು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಂಡಿದೆ ಎಂದು ಹೇಳಿದರು.