ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದ್ದು, ಮುಂಜಾಗೃತಾ ಕ್ರಮವಾಗಿ ಶಾಲೆಗಳನ್ನು ಮತ್ತೆ ಬಂದ್ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ.
ಈ ಕುರಿತು ಮಾತನಾಡಿದ ಶಿಕ್ಷಣ ಸಚಿವ ಸುರೇಶ್ ಕುಮಾರ್, ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವುದರಿಂದ ಬೆಂಗಳೂರಿನಲ್ಲಿ ಮಾತ್ರ 6ರಿಂದ 9ನೇ ತರಗತಿಗಳನ್ನು 15 ದಿನಗಳ ಕಾಲ ಸ್ಥಗಿತಗೊಳಿಸಿರುವುದಾಗಿ ತಿಳಿಸಿದರು.
ರಾಜ್ಯದಲ್ಲಿ ಮುಂದಿನ 15 ದಿನಗಳು ನಿರ್ಣಾಯಕವಾಗಿದ್ದು, ಕೋವಿಡ್ ತಾಂತ್ರಿಕ ಸಲಹಾ ಸಮಿತಿ ನಿರ್ದೇಶನದ ಮೇರೆಗೆ 15 ದಿನಗಳ ಕಾಲ 6-9ನೇ ತರಗತಿವರೆಗೆ ಸ್ಥಗಿತಗೊಳಿಸಲಾಗಿದೆ. ಇನ್ನು 10ನೇ ತರಗತಿಯವರು ಕ್ಲಾಸ್ ಗೆ ಬರುವುದು ಮೊದಲಿನಿಂದಲೂ ಕಡ್ಡಾಯವಿರಲಿಲ್ಲ. ಹೀಗಾಗಿ ಈ ವಿಚಾರದಲ್ಲಿ ಯಾವುದೇ ಗೊಂದಲ ಬೇಡ ಎಂದರು.