ದಾವಣಗೆರೆ: ರಾಜ್ಯದಲ್ಲಿ ಕೊರೊನಾ ಸ್ಫೋಟವಾಗುತ್ತಿದ್ದು, ಶಾಲಾ -ಕಾಲೇಜುಗಳನ್ನೇ ಹೆಚ್ಚಾಗಿ ಟಾರ್ಗಟ್ ಮಾಡುತ್ತಿದೆ. ಹೀಗಾಗಿ ಹೆಚ್ಚಿನ ಪಾಲಕರು ಆತಂಕ ವ್ಯಕ್ತಪಡಿಸುತ್ತಿದ್ದು, ತಮ್ಮ ಮಕ್ಕಳನ್ನು ವಸತಿ ಶಾಲೆಯಿಂದ ಕರೆದುಕೊಂಡು ಹೋಗುತ್ತಿದ್ದಾರೆ.
ವಸತಿ ಶಾಲೆಗಳಲ್ಲಿನ ವಿದ್ಯಾರ್ಥಿಗಳಲ್ಲಿ ಸೋಂಕು ಹೆಚ್ಚಾಗಿ ಹಬ್ಬುತ್ತಿರುವ ಹಿನ್ನೆಲೆಯಲ್ಲಿ ಪಾಲಕರು ಆತಂಕ ವ್ಯಕ್ತಪಡಿಸುತ್ತಿದ್ದಾರೆ. ಹೀಗಾಗಿ ತಮ್ಮ ಮಕ್ಕಳ ಸುರಕ್ಷತೆಗಾಗಿ ಮಕ್ಕಳನ್ನು ಮನೆಗೆ ಕರೆದುಕೊಂಡು ಹೋಗುತ್ತಿದ್ದಾರೆ. ಅಲ್ಲದೇ, ಆನ್ ಲೈನ್ ತರಗತಿ ಪ್ರಾರಂಭಿಸುವಂತೆ ಮನವಿ ಮಾಡುತ್ತಿದ್ದಾರೆ.
ದಾವಣಗೆರೆ ಜಿಲ್ಲೆಯಲ್ಲಿ ಒಂದೇ ವಾರದಲ್ಲಿ ಬರೋಬ್ಬರಿ 213 ವಿದ್ಯಾರ್ಥಿಗಳಲ್ಲಿ ಸೋಂಕು ಕಾಣಿಸಿಕೊಂಡಿದೆ. ಮತ್ತೆ ಹಲವು ವಿದ್ಯಾರ್ಥಿಗಳಲ್ಲಿ ಸೋಂಕು ಕಾಣಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಹೀಗಾಗಿ ಪಾಲಕರು ಹೆಚ್ಚು ಆತಂಕ ವ್ಯಕ್ತಪಡಿಸುತ್ತಿದ್ದಾರೆ.
ಸದ್ಯದಲ್ಲಿಯೇ ಪಿಯುಸಿ, ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ಸಮೀಪಿಸುತ್ತಿವೆ. ಹೀಗಾಗಿ ಶಾಲಾ ಶಿಕ್ಷಕರು ಹಾಗೂ ಆಡಳಿತ ಮಂಡಳಿಗಳು ವಿದ್ಯಾರ್ಥಿಗಳ ಪಾಠದತ್ತ ಹೆಚ್ಚಿನ ಆಸಕ್ತಿ ತೋರಿಸುತ್ತಿದ್ದರೆ, ಪಾಲಕರಿಗೆ ಮಕ್ಕಳ ಆರೋಗ್ಯದ ಚಿಂತೆಯಾಗುತ್ತಿದೆ. ಈ ಸಂದರ್ಭದಲ್ಲಿ ಹೆಚ್ಚಿನ ಪಾಲಕರು ಮಕ್ಕಳ ಆರೋಗ್ಯವೇ ಮುಖ್ಯ ಎಂದು ಹೇಳುತ್ತಿದ್ದಾರೆ.