ಇತ್ತೀಚಿನ ದಿನಗಳಲ್ಲಿ ಕೊರೊನಾ ಅಟ್ಟಹಾಸ ಕೊಂಚ ಕಡಿಮೆಯಾಗಿದೆ. ಸೋಂಕಿನ ತೀವ್ರತೆ ಇಳಿಯುತ್ತಿದೆ. ಆದರೆ ಜನ ಇದನ್ನು ನಿರ್ಲಕ್ಷಿಸಬಾರದು ಎಂದು ಎಚ್ಚರಿಕೆ ನೀಡಿದ್ದಾರೆ ಜಯದೇವ ಹೃದ್ರೋಗ ಆಸ್ಪತ್ರೆಯ ನಿರ್ದೇಶಕ ಡಾ.ಸಿ.ಎನ್. ಮಂಜುನಾಥ್.
ಹೌದು, ಲಯನ್ಸ್ ಕ್ಲಬ್‌ನಲ್ಲಿ ಆಯೋಜನೆ ಮಾಡಿದ್ದ ರಾಷ್ಟ್ರೀಯ ಪತ್ರಿಕೋದ್ಯಮ ದಿನಾಚರಣೆಯಲ್ಲಿ ಮಾತನಾಡಿದ ಅವರು, ಕೊರೊನಾವನ್ನು ಯಾವತ್ತೂ ನಿರ್ಲಕ್ಷ ಮಾಡಬೇಡಿ. ಮುನ್ನೆಚ್ಚರಿಕಾ ಕ್ರಮಗಳನ್ನು ಪಾಲಿಸಿ. ಮಾಸ್ಕ್ ಧರಿಸದೇ ಇದ್ದರೆ ಸೋಂಕು ಹರಡುವುದು ಖಂಡಿತ ಎಂದು ಹೇಳಿದ್ದಾರೆ.
ಹಾಗೆಯೇ ಮುಂದಿನ ಫೆಬ್ರವರಿ ಹಾಗೂ ಮಾರ್ಚ್ ತಿಂಗಳಲ್ಲಿ ಸೋಂಕಿನ ಪ್ರಮಾಣ ಹೆಚ್ಚಾಗಬಹುದು. ಕೊರೊನಾ ಎರಡನೇ ಅಲೆ ಬರಬಹುದು. ಹಾಗಾಗಿ ತುಂಬಾ ಹುಷಾರಾಗಿ ಇರಬೇಕು. ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡುವುದು ಕೂಡ ತುಂಬಾ ಮುಖ್ಯ ಎಂದರು.