ರಾಜ್ಯದಲ್ಲಿ ಕೊರೊನಾ ಆರ್ಭಟ ನಡೆಸುತ್ತಿದ್ದು, ಶುಕ್ರವಾರ ಒಂದೇ ದಿನ ಈ ಮಹಾಮಾರಿಗೆ ಏಳು ಮಂದಿ ಬಲಿಯಾಗಿದ್ದಾರೆ. ಸೋಂಕಿತರ ಸಂಖ್ಯೆ ಒಟ್ಟು ಸಂಖ್ಯೆ 6,516 ಕ್ಕೆ ತಲುಪಿದ್ದು, ಇದರ ಜೊತೆಗೆ ಈಗ ಮತ್ತೊಂದು ಭೀತಿಯೂ ತಲೆದೋರಿದೆ.
ಮುಂಗಾರು ಆರಂಭವಾಗುತ್ತಿದ್ದಂತೆ ಡೆಂಗೆ, ಚಿಕೂನ್ ಗುನ್ಯಾ, ಎಚ್1 ಎನ್1 ಮೊದಲಾದ ಸಾಂಕ್ರಾಮಿಕ ರೋಗಗಳು ಕಾಡಬಹುದೆಂದು ಹೇಳಲಾಗುತ್ತಿದ್ದು, ಹೀಗಾಗಿ ಸಾರ್ವಜನಿಕರು ಎಚ್ಚರಿಕೆ ವಹಿಸುವುದು ಅಗತ್ಯವಾಗಿದೆ.
ಈ ರೋಗಗಳ ಲಕ್ಷಣ ಬಹುತೇಕ ಕೊರೊನಾ ಸೋಂಕಿನ ಲಕ್ಷಣಗಳನ್ನು ಹೊಂದಿರುವ ಕಾರಣ ಅನಗತ್ಯವಾಗಿ ಗಾಬರಿಗೊಳ್ಳುವ ಸಾಧ್ಯತೆ ಇರುತ್ತದೆ. ಹೀಗಾಗಿ ಕೊರೊನಾ ಸೇರಿದಂತೆ ಇತರೆ ಸಾಂಕ್ರಾಮಿಕ ರೋಗಗಳು ತಗುಲದಂತೆ ಸಾರ್ವಜನಿಕರು ಮುನ್ನೆಚ್ಚರಿಕೆ ಕೈಗೊಳ್ಳಬೇಕಿದೆ.